ADVERTISEMENT

ಹೊನ್ನಿಗನಹಳ್ಳಿ ಎಂಪಿಸಿಎಸ್ ಗೆ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 2:41 IST
Last Updated 23 ಫೆಬ್ರುವರಿ 2026, 2:41 IST
ಚನ್ನಪಟ್ಟಣ ತಾಲ್ಲೂಕಿನ ಹೊನ್ನಿಗನಹಳ್ಳಿ ಎಂಪಿಸಿಎಸ್ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಮರಿಸ್ವಾಮಿ, ಉಪಾಧ್ಯಕ್ಷ ಎಚ್.ಸಿ. ನಾಗರಾಜು, ನಿರ್ದೇಶಕರನ್ನು ಅಭಿನಂದಿಸಲಾಯಿತು
ಚನ್ನಪಟ್ಟಣ ತಾಲ್ಲೂಕಿನ ಹೊನ್ನಿಗನಹಳ್ಳಿ ಎಂಪಿಸಿಎಸ್ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಮರಿಸ್ವಾಮಿ, ಉಪಾಧ್ಯಕ್ಷ ಎಚ್.ಸಿ. ನಾಗರಾಜು, ನಿರ್ದೇಶಕರನ್ನು ಅಭಿನಂದಿಸಲಾಯಿತು   

ಚನ್ನಪಟ್ಟಣ: ತಾಲ್ಲೂಕಿನ ಹೊನ್ನಿಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಮರಿಸ್ವಾಮಿ, ಉಪಾಧ್ಯಕ್ಷರಾಗಿ ಎಚ್.ಸಿ. ನಾಗರಾಜು ಅವಿರೋಧವಾಗಿ ಆಯ್ಕೆಯಾದರು.

ಭಾನುವಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ಪುರುಷೋತ್ತಮ್ ಕಾರ್ಯನಿರ್ವಹಿಸಿದರು.

ಇದಕ್ಕೂ ಮೊದಲು ನಡೆದ ಸಂಘದ ನಿರ್ದೇಶಕರ ಆಯ್ಕೆ ಚುನಾವಣೆಯಲ್ಲಿ ನೂತನ ನಿರ್ದೇಶಕರಾಗಿ ನಾಗರಾಜು, ಕೆ.ಪ್ರಸನ್ನಕುಮಾರ್, ಮಲ್ಲೇಶ್, ಸಿದ್ದರಾಜು, ವೆಂಕಟಲಕ್ಷ್ಮಮ್ಮ, ಶಾಂತಮ್ಮ, ಮಂಜುಳ, ರಾಜೇಗೌಡ ಆಯ್ಕೆಯಾದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.