ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಹೊಸದುರ್ಗ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ವಲಸೆ ಚೌಡಮ್ಮ ಆಯ್ಕೆಯಾಗಿದ್ದಾರೆ.
ಪಂಚಾಯಿತಿ ಉಪಾಧ್ಯಕ್ಷೆ ನಾಗುಬಾಯಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಚೌಡಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ಚುನಾವಣಾಧಿಕಾರಿ ಮತ್ತಿಗೌಡ ಚೌಡಮ್ಮ ಅವರನ್ನೇ ಅವಿರೋಧವಾಗಿ ಘೋಷಿಸಿದರು.
ಸಹಾಯಕ ಚುನಾವಣಾಧಿಕಾರಿಯಾಗಿ ಎನ್.ಎಸ್.ರಘು ಕಾರ್ಯನಿರ್ವಹಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸಪ್ಪ, ಮುನುಚ್ಚೇಗೌಡ, ತಿಬ್ಬೆಗೌಡ, ಮಧುಸೂಧನ್, ಶಿವರಾಜು, ಪಂಚಾಯತಿಯ ಎಲ್ಲಾ ಸದಸ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.