ಪ್ರಜಾವಾಣಿ ವಾರ್ತೆ
ಚನ್ನಪಟ್ಟಣ: ವಂದಾರಗುಪ್ಪೆ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ ಈಚೆಗೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ದೇವರಹೊಸಹಳ್ಳಿ ಶ್ರೀಕಂಠಯ್ಯ ಮಾತನಾಡಿ, ಸಂಘದ ವತಿಯಿಂದ ರೈತರಿಗೆ ₹ 5.49 ಕೋಟಿ ಕೃಷಿ ಸಾಲ ನೀಡಲಾಗಿದೆ. 2022-23ನೇ ಸಾಲಿನಲ್ಲಿ ಸಂಘ ₹ 5.30 ಲಕ್ಷ ಲಾಭ ಗಳಿಸಿದೆ. ಸಂಘದ ಮೂಲ ಬಂಡವಾಳದಿಂದ ಕೃಷಿ ಸಾಲ, ಸ್ತ್ರೀಶಕ್ತಿ ಸಾಲ, ಆಭರಣ ಸಾಲ ನೀಡಲಾಗಿದೆ ಎಂದು ತಿಳಿಸಿದರು.
ಸಂಘವು ಸದಸ್ಯರ ಹಾಗೂ ಪದಾಧಿಕಾರಗಳ ಸಹಕಾರದಿಂದ ಉತ್ತಮವಾಗಿ ನಡೆಯುತ್ತಿದೆ. ಸಾಲ ಮರುಪಾವತಿಯು ಆಶಾದಾಯಕ ವಾಗಿದೆ. ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರಕ್ಕೆ ಮತ್ತಷ್ಟು ಸಾಲಸೌಲಭ್ಯ ಒದಗಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಎಸ್ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ಸಂಘದ ನಿರ್ದೇಶಕರಾದ ವಿ.ಬಿ. ಚಂದ್ರಯ್ಯ, ರಾಮಮೂರ್ತಿ, ರಾಮ ಸಂಜೀವಯ್ಯ, ವಿ.ಅನಿಲ್ ಕುಮಾರ್, ದ್ಯಾವಯ್ಯ, ಗೌರಮ್ಮ, ಚಿಕ್ಕತಾಯಮ್ಮ, ಸಂಘದ ಸಿಇಒ ಅರುಣ್ ಕುಮಾರ್, ಗ್ರಾಮದ ಎಂಪಿಸಿಎಸ್ ಕಾರ್ಯದರ್ಶಿ ರವಿ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.