ADVERTISEMENT

ವಿಜಯ್ ಪ್ರಕಾಶ್ ಸಂಗೀತ ಸಂಜೆ 23ರಂದು

​ಪ್ರಜಾವಾಣಿ ವಾರ್ತೆ
Published 19 ಜುಲೈ 2019, 14:02 IST
Last Updated 19 ಜುಲೈ 2019, 14:02 IST
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್ ಮಾತನಾಡಿದರು
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್ ಮಾತನಾಡಿದರು   

ರಾಮನಗರ: ಚಾಮುಂಡೇಶ್ವರಿ ಕರಗ ಮಹೋತ್ಸವ ಅಂಗವಾಗಿ ಇದೇ 23ರಂದು ಸಂಜೆ ಜಿಲ್ಲಾ ಕ್ರೀಡಾಂಗಣದಲ್ಲಿ ಖ್ಯಾತ ಹಿನ್ನಲೆ ಗಾಯಕ ವಿಜಯ್ ಪ್ರಕಾಶ್‌ ತಂಡದಿಂದ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚಾಮುಂಡೇಶ್ವರಿ ಉತ್ಸವದ ಅಂಗವಾಗಿ ಈ ವರ್ಷವೂ ಅದ್ದೂರಿ ರಸಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ನಟ ನಿಖಿಲ್ ಕುಮಾರ್ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಬಾರಿ ಗಾಯಕ ವಿಜಯ್ ಪ್ರಕಾಶ್ ಅವರೊಟ್ಟಿಗೆ ಅನುರಾಧ ಭಟ್, ಆದ್ಯ ಸೇರಿದಂತೆ ಹಲವು ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಕಲರ್ ಕನ್ನಡ ವಾಹಿನಿ ನೃತ್ಯ ತಂಡ, ಹರಿಪ್ರಿಯ ನೃತ್ಯ ತಂಡವು ಪ್ರದರ್ಶನ ನೀಡಲಿದೆ. ಇದರೊಟ್ಟಿಗೆ ಸ್ಥಳೀಯ ತಂಡಗಳಿಗೂ ಅವಕಾಶ ಮಾಡಿಕೊಡಲಾಗುವುದು ಎಂದರು.

ADVERTISEMENT

ಅದ್ದೂರಿ ವೇದಿಕೆ: ಹಿಂದೆಂದಿಗಿಂತ ಬೃಹತ್ ಪ್ರಮಾಣದ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿಯೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಜೆಡಿಎಸ್ ಮುಖಂಡರಾದ ಉಮೇಶ್, ರೈಡ್‌ ನಾಗರಾಜು, ಗೂಳಿ ಕುಮಾರ್, ರವಿ, ಜಯಕುಮಾರ್, ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.