ADVERTISEMENT

ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ

ಕನಕಪುರ ಕ್ಷೇತ್ರ ಗೆಲ್ಲಲು ಬಿಜೆಪಿ ಕಾರ್ಯತಂತ್ರ

​ಪ್ರಜಾವಾಣಿ ವಾರ್ತೆ
Published 22 ಜನವರಿ 2023, 4:28 IST
Last Updated 22 ಜನವರಿ 2023, 4:28 IST
ಕನಕಪುರ ವರಗೇರಹಳ್ಳಿಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನಕ್ಕೆ ಪಕ್ಷದ ಜಿಲ್ಲಾ ಪ್ರಭಾರಿ ರವೀಶ್ ಚಾಲನೆ ನೀಡಿದರು. ಈ ವೇಳೆ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಇದ್ದರು
ಕನಕಪುರ ವರಗೇರಹಳ್ಳಿಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನಕ್ಕೆ ಪಕ್ಷದ ಜಿಲ್ಲಾ ಪ್ರಭಾರಿ ರವೀಶ್ ಚಾಲನೆ ನೀಡಿದರು. ಈ ವೇಳೆ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಇದ್ದರು   

ಕನಕಪುರ: ಕಸಬಾ ಹೋಬಳಿ ವರಗೇರಹಳ್ಳಿಯಲ್ಲಿ ಶನಿವಾರ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ನಡೆಯಿತು.

ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದ ಪಕ್ಷದ ಜಿಲ್ಲಾ ಪ್ರಭಾರಿ ರವೀಶ್, ‘ಇದೇ 28ರವರೆಗೆ ಈ ಅಭಿಯಾನ ನಡೆಯಲಿದೆ. ರಾಮನಗರ ಜಿಲ್ಲೆಯಲ್ಲಿ ಮೂರು ಲಕ್ಷ ನೋಂದಣಿ ಮಾಡುವ ಗುರಿ ಹೊಂದಿದ್ದೇವೆ. ಜನವರಿ 29ರಂದು ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ ನಡೆಯಲಿದ್ದು, ಇದರ ಯಶಸ್ಸಿಗೆ ಶ್ರಮಿಸಬೇಕು’ ಎಂದು ಹೇಳಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ‘ಕನಕಪುರ ವಿಧಾನಸಭಾ ಕ್ಷೇತ್ರದಲ್ಲೂ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಗೆಲ್ಲಿಸುವ ಮೂಲಕ ಬಿಜೆಪಿಯ ಬಾವುಟ ಹಾರಿಸುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಕ್ಷೇತ್ರದಲ್ಲಿ ಭಯದ ವಾತಾವರಣ ಸೃಷ್ಟಿಸಲಾಗಿದ್ದು, ಇದಕ್ಕೆಲ್ಲ ಬಗ್ಗುವುದಿಲ್ಲ. ಇಲ್ಲಿಯೂ ಪಕ್ಷದ ಅಭಿಮಾನಿಗಳು ಮತ್ತು ಕಾರ್ಯಕರ್ತರು ಇದ್ದಾರೆ ಎಂದು ಹೇಳಿದರು. ಈ ಮೂಲಕ ಹಾಲಿ ಶಾಸಕ ಡಿ.ಕೆ. ಶಿವಕುಮಾರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ತಾಲ್ಲೂಕು ಪ್ರಭಾರಿ ಶೀಗೇಕೋಟೆ ರವಿಕುಮಾರ್ ಮಾತನಾಡಿದರು.

ಚನ್ನಪಟ್ಟಣ ಗ್ರಾಮಾಂತರ ಮಂಡಲ ಅಧ್ಯಕ್ಷ ಜೈರಾಮು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್‌, ಜಿಲ್ಲಾ ಕೆಡಿಪಿ ಸದಸ್ಯ ಕೃಷ್ಣಪ್ಪ, ಉಪಾಧ್ಯಕ್ಷ ಮುರಳಿ, ಅಭಿಯಾನದ ಜಿಲ್ಲಾ ಸಹ ಸಂಚಾಲಕ ಮಂಜುನಾಥ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ರಮೇಶ್, ಮುನಿಸಿದ್ದೇಗೌಡ, ಕಾರ್ಯಕಾರಿ ಸಮಿತಿ ಸದಸ್ಯ ಮರಿಗೌಡ, ತಾಲ್ಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಶಿವಮುತ್ತು, ರೈತ ಮೋರ್ಚಾ ಅಧ್ಯಕ್ಷ ಸಿದ್ಧಮರಿಗೌಡ, ತುಂಗಣಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಶೇಖರ್, ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಸನ್ನ, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷ ಶಶಿಕಲಾ, ಮುನಿನಿಂಗೇಗೌಡ, ನಾಗರಾಜು, ರಾಮಚಂದ್ರ, ಸುರೇಂದ್ರ, ಪಾಲಾಕ್ಷ, ಗುಣಸಾಗರ, ಸುರೇಶ್, ತಿಮ್ಮಪ್ಪ, ಮಂಗಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.