ADVERTISEMENT

ವಿರುಪಾಕ್ಷಿಪುರ: ಕಾಡಾನೆ ದಾಳಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 2:29 IST
Last Updated 18 ಜೂನ್ 2020, 2:29 IST
ಚನ್ನಪಟ್ಟಣ ತಾಲ್ಲೂಕಿನ ವಿರುಪಾಕ್ಷಿಪುರ ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಬಾಳೆತೋಟ ಧ್ವಂಸ ಮಾಡಿರುವುದು
ಚನ್ನಪಟ್ಟಣ ತಾಲ್ಲೂಕಿನ ವಿರುಪಾಕ್ಷಿಪುರ ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಬಾಳೆತೋಟ ಧ್ವಂಸ ಮಾಡಿರುವುದು   

ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಮಂಗಳವಾರ ರಾತ್ರಿ ದಾಳಿ ನಡೆಸಿ ರೈತರ ಬೆಳೆಗಳನ್ನು ನಾಶಪಡಿಸಿವೆ.

ಗ್ರಾಮದ ರೈತರಾದ ಶಿವಲಿಂಗಯ್ಯ, ಶ್ರೀನಿವಾಸ್, ಗೋವಿಂದೇಗೌಡ ಅವರ ಬಾಳೆ, ಮಾವು, ಅಡಿಕೆ, ತೆಂಗು ಬೆಳೆ ದಾಳಿಗೆ ತುತ್ತಾಗಿವೆ.

ಸುಮಾರು 7 ಆನೆಗಳಿದ್ದ ಹಿಂಡು ಪಕ್ಕದ ತೆಂಗಿನಕಲ್ಲು ಅರಣ್ಯ ಪ್ರದೇಶದಿಂದ ಬಂದಿವೆ. ಕೆಲವೇ ದಿನಗಳಲ್ಲಿ ಗೊನೆ ಬರಲಿದ್ದ ನೂರಾರು ಬಾಳೆ ಗಿಡಗಳನ್ನು ಧ್ವಂಸ ಮಾಡಿವೆ. ಮಾವಿನ ಮರದ ರೆಂಬೆಗಳು ಮುರಿದು ಹಾಕಿವೆ. ಅಡಿಕೆ, ತೆಂಗಿನ ಸಸಿಗಳನ್ನು ಕಿತ್ತು ಬಿಸಾಡಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ರೈತರು ಅಳಲು ತೋಡಿಕೊಂಡರು.

ADVERTISEMENT

ಅರಣ್ಯ ಇಲಾಖೆ ಆನೆಗಳ ಹಾವಳಿ ನಿಯಂತ್ರಣಕ್ಕೆ ತರಬೇಕು. ಜೊತೆಗೆ ಪರಿಹಾರ ವಿತರಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.