ADVERTISEMENT

ಕುದೂರು: ಸ್ವಯಂಪ್ರೇರಿತ ಲಾಕ್‌ಡೌನ್‌

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 6:48 IST
Last Updated 22 ಏಪ್ರಿಲ್ 2021, 6:48 IST
ಮಾಗಡಿ ತಾಲ್ಲೂಕಿನ ಕುದೂರು ಗ್ರಾಮದಲ್ಲಿ ಸ್ವಯಂಪ್ರೇರಿತ ಲಾಕ್‌ಡೌನ್‌ನಿಂದಾಗಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು
ಮಾಗಡಿ ತಾಲ್ಲೂಕಿನ ಕುದೂರು ಗ್ರಾಮದಲ್ಲಿ ಸ್ವಯಂಪ್ರೇರಿತ ಲಾಕ್‌ಡೌನ್‌ನಿಂದಾಗಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು   

ಕುದೂರು(ಮಾಗಡಿ): ಗ್ರಾಮದಲ್ಲಿ ಕೊರೊನಾ ಸೋಂಕು ಉಲ್ಬಣವಾಗಿರುವ ಹಿನ್ನೆಲೆಯಲ್ಲಿ ವರ್ತಕರ ಸಂಘ ಮತ್ತು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಬುಧವಾರದಿಂದ ಸ್ವಯಂಪ್ರೇರಿತ ಲಾಕ್‌ಡೌನ್‌ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ ಚಿಕ್ಕರಾಜು ತಿಳಿಸಿದರು.

ಸ್ವಯಂಪ್ರೇರಿತ ಲಾಕ್‌ಡೌನ್‌ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಂಜಾನೆಯಿಂದ ಮಧ್ಯಾಹ್ನ 1.30ರ ತನಕ ವರ್ತಕರು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಮಧ್ಯಾಹ್ನ 1.30ರ ನಂತರ ಹೋಟೆಲ್‌, ಅಂಗಡಿಮುಗ್ಗಟ್ಟುಗಳು, ಇತರೆ ಎಲ್ಲಾ ವಾಣಿಜ್ಯ ವ್ಯವಹಾರಗಳನ್ನು ವರ್ತಕರೆ ಸ್ವಯಂ ಪ್ರೇರಿತರಾಗಿ ಬಂದ್‌ ಮಾಡಿ ಗ್ರಾಮ ಪಂಚಾಯಿತಿಯೊಂದಿಗೆ ಸಹಕರಿಸುತ್ತಿದ್ದಾರೆ ಎಂದರು.

ಕೋವಿಡ್‌ ಸೋಂಕಿನಿಂದ ಗ್ರಾಮ ಸುರಕ್ಷಿತವಾಗಿರಲಿ ಎಂಬ ಸದುದ್ದೇಶದಿಂದ ಲಾಕ್‌ಡೌನ್‌ ಮಾಡಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

‘ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದವು. ಆಟೊಗಳ ಸಂಚಾರ ವಿರಳವಾಗಿತ್ತು. ಗ್ರಾಮದಲ್ಲಿ ಮಧ್ಯಾಹ್ನ ಮಳೆ ಸುರಿಯಿತು. ಜನಸಾಮಾನ್ಯರು ಮನೆಯಿಂದ ಹೊರಗೆ ಬಂದಿರಲಿಲ್ಲ. ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಎಲ್ಲರೂ ಸಹಕಾರ ನೀಡಬೇಕು. ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಆಗಷ್ಟೇ ಸೋಂಕು ನಿಯಂತ್ರಣ ಸಾಧ್ಯ’ ಎಂದು ಉಪಾಧ್ಯಕ್ಷ ಕೆ.ಬಿ. ಬಾಲರಾಜು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.