ಕನಕಪುರ: ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿರುವ ಘಟನೆ ತಾಲ್ಲೂಕಿನ ಕೊಳಗೊಂಡನಹಳ್ಳಿ ಸಮೀಪದ ಕಾಡಿನಲ್ಲಿ ಬುಧವಾರ ನಡೆದಿದೆ.
ಗಟ್ಟಿಗುಂದ ಗ್ರಾಮದ ಕೂಲಿ ಕಾರ್ಮಿಕ ಚಿಕ್ಕರಾಮಯ್ಯ (60) ಮೃತರು. ಗ್ರಾಮದ ಸಮೀಪ ಕಾಡಿನಲ್ಲಿರುವ ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿ ವಾಪಸ್ ಬರುವಾಗ ಒಂಟಿ ಆನೆ ದಾಳಿ ನಡೆಸಿದೆ.
ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಕೋಡಿಹಳ್ಳಿ ಠಾಣೆಯಲ್ಲಿ ಪ‍್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.