ಹಾರೋಹಳ್ಳಿ: ಕಗ್ಗಲ್ಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗೂಳಟ್ಟಿ ಗ್ರಾಮದ ಸತ್ಯಮೂರ್ತಿ ಎಂಬುವವರ ಮನೆ ಮೇಲೆ ಸೋಮವಾರ ಮುಂಜಾನೆ ಸುಮಾರು 3 ಗಂಟೆಗೆ ಕಾಡಾನೆ ದಾಳಿ ನಡೆಸಿದೆ.
ಕಳೆದ ಎರಡ್ಮೂರು ದಿನಗಳಿಂದ ಸತತವಾಗಿ ಮನೆಯ ಬಳಿ ಕಾಡನೆ ಬರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾಡಾನೆ ದಾಳಿಯಿಂದಾಗಿ ಮನೆಯ ಗೇಟ್ ಹಾಗೂ ಕಾಂಪೌಂಡ್ ಧ್ವಂಸಗೊಂಡಿದೆ.
ಇಷ್ಟು ದಿನ ರಸ್ತೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಈಗ ಏಕಾಏಕಿ ಮನೆ ಬಳಿ ಕಾಣಿಸಿಕೊಳ್ಳುತ್ತಿದ್ದು, ಮನೆಯಿಂದ ಹೊರಬರಲು ನಿವಾಸಿಗಳು ಭಯ ಬೀಳುವಂತಾಗಿದೆ.
ದಿನೇ ದಿನೇ ಗ್ರಾಮದಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದ್ದು, ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.