ADVERTISEMENT

ಕನಕಪುರ: ಕಾಡುಪ್ರಾಣಿ ಬೇಟೆಗೆ ಯತ್ನ; ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 4:22 IST
Last Updated 3 ಫೆಬ್ರುವರಿ 2026, 4:22 IST
<div class="paragraphs"><p>ಬಂಧನ</p></div>

ಬಂಧನ

   

ಕನಕಪುರ: ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಚಿಕ್ಕ ಮುಕ್ಕೋಡ್ಲು ಬಳಿ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚಟ್ಟಿ ತಾಲ್ಲೂಕಿನ ಬೈಲಾ ಕಾಡು ಗ್ರಾಮದ ದೇವರಾಜು (42), ಬರೇಕಲ್ (33) ಬಂಧಿತರು. ತಲೆಮರೆಸಿಕೊಂಡಿರುವ ಆರೋಪಿ ಕೋಣಪ್ಪನ್ (28) ಅವರಿಗೆ ಶೋಧಕಾರ್ಯ ಕೈಗೊಂಡಿದ್ದಾರೆ.

ADVERTISEMENT

ಆರೋಪಿಗಳು ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಚಿಕ್ಕಮುಕ್ಕೋಡ್ಲು ಸಮೀಪದ ಮೋಪುರಿ ಗುಡಿ ದಾರಿ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಜ. 28 ರಂದು ರಾತ್ರಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದರು.

ಈ ಸಂದರ್ಭದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಬಂಧಿತರಿಂದ 2 ಜೀವಂತ ನಾಡ ಬಾಂಬ್, ಚೂರಿ, ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ಉರುಳು, ಹಣೆ ಬ್ಯಾಟರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.