
ಬಂಧನ (ಸಾಂದರ್ಭಿಕ ಚಿತ್ರ)
ಕನಕಪುರ: ಅರಣ್ಯದಲ್ಲಿ ಅಕ್ರಮವಾಗಿ ವನ್ಯಜೀವಿ ಬೇಟೆಯಾಡಿ ಸಾಗಿಸುತ್ತಿದ್ದ ನಾಲ್ವರನ್ನು ಅರಣ್ಯ ಇಲಾಖೆ ಸಿಐಡಿ ಘಟಕ ಮತ್ತು ಸಂಚಾರ ದಳವು ಬಂಧಿಸಿದೆ.
ಕೊಳ್ಳೇಗಾಲ ಅರಣ್ಯ ಪ್ರದೇಶದಲ್ಲಿ ಮುಳ್ಳಂದಿಯನ್ನು ಕೊಂದು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪಿಗಳ ಮೇಲೆ ಬುಧವಾರ ಸಾತನೂರಿನಲ್ಲಿ ಅರಣ್ಯ ಸಿಬ್ಬಂದಿ ದಾಳಿ ನಡೆಸಿತು. ಎರಡು ದೇಶಿ ಬಂದೂಕು, ಮದ್ದು, ಗುಂಡು ಮತ್ತು ಇತರ ಆಯುಧಗಳನ್ನು ಅಧಿಕಾರಿಗಳು ವಶಕ್ಕೆ ಪಡೆದರು.
ಉಯ್ಯಂಬಳ್ಳಿ ಹೋಬಳಿ ನಲ್ಲಳ್ಳಿ ಗ್ರಾಮದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಅರಣ್ಯದಲ್ಲಿ ಅಕ್ರಮವಾಗಿ ವನ್ಯಜೀವಿಯನ್ನು ಬೇಟೆಯಾಡಿ ಸಾಗಿಸುತ್ತಿದ್ದಾಗ ಅರಣ್ಯ ಇಲಾಖೆ ಸಿಐಡಿ ಘಟಕ ಮತ್ತು ಅರಣ್ಯ ಸಂಚಾರಿ ದಳ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಳ್ಳೇಗಾಲ ಅರಣ್ಯ ಪ್ರದೇಶದಲ್ಲಿ ಮುಳ್ಳಂದಿಯನ್ನು ಬೇಟೆಯಾಡಿ ಅದನ್ನು ಕಾರಿನಲ್ಲಿ ಸಾಗಿಸುತ್ತಿದ್ದಾಗ ಬುಧವಾರ ಸಾತನೂರಿನಲ್ಲಿ ಅರಣ್ಯ ಸಂಚಾರಿ ದಳವು ದಾಳಿ ನಡೆಸಿದೆ.
ದಾಳಿ ವೇಳೆ ಸ್ವಿಫ್ಟ್ ಕಾರಿನಲ್ಲಿ ಒಂದು ಮುಳ್ಳಂದಿ, ಎರಡು ನಾಡ ಬಂದೂಕು, ಬೇಟೆಗೆ ಬಳಸಿದಂತಹ ಮದ್ದು, ಗುಂಡು ಹಾಗೂ ಆಯುಧಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅರಣ್ಯದಲ್ಲಿ ಅಕ್ರಮವಾಗಿ ಬೇಟೆಯಾಡಿದಂತಹ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಯ್ಯಂಬಳ್ಳಿ ಹೋಬಳಿ ನಲ್ಲಳ್ಳಿ ಗ್ರಾಮದವರೆಂದು ತಿಳಿದು ಬಂದಿದೆ.
ಅರಣ್ಯ ಅಧಿಕಾರಿಗಳು ಬಂಧಿತ ಆರೋಪಿಗಳ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.