ADVERTISEMENT

2028ಕ್ಕೆ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ: ಎಚ್‌.ಡಿ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2023, 12:50 IST
Last Updated 27 ಫೆಬ್ರುವರಿ 2023, 12:50 IST
ಎಚ್‌.ಡಿ ಕುಮಾರಸ್ವಾಮಿ
ಎಚ್‌.ಡಿ ಕುಮಾರಸ್ವಾಮಿ    

ಚನ್ನಪಟ್ಟಣ: ಚನ್ನಪಟ್ಟಣದ ಅಭ್ಯರ್ಥಿಯಾಗಿ 2023ರ ಚುನಾವಣೆ ನನ್ನ ಕೊನೆಯ ಚುನಾವಣೆ. 2028ರಲ್ಲಿ ಇಲ್ಲಿಂದ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಸೋಮವಾರ ಬಮುಲ್‌ ಉತ್ಸವದಲ್ಲಿ ಪಾಲ್ಗೊಂಡಿದ್ದ ಅವರು ನಂತರ ಪತ್ರಕರ್ತರ ಜೊತೆ ಮಾತನಾಡಿದರು.

‘2028ರಲ್ಲಿ ಇಲ್ಲಿಂದ ಸ್ಪರ್ಧಿಸುವುದಿಲ್ಲ. ಇಲ್ಲಿನ ಕಾರ್ಯಕರ್ತರಿಗೇ ಟಿಕೆಟ್‌ ನೀಡುತ್ತೇನೆ. ನನಗೂ ರಾಜಕೀಯವಾಗಿ ವಿಶ್ರಾಂತಿಯ ಅಗತ್ಯವಿದೆ’ ಎಂದು ಕುಮಾರಸ್ವಾಮಿ ಹೇಳಿದರು.

ADVERTISEMENT

‘ಹಾಸನದಲ್ಲಿ ಚುನಾವಣೆಗೆ ಅಭ್ಯರ್ಥಿ ಆಗಬೇಕು ಎಂದು ಆಸೆ ಇರುವವರು ಗೊಂದಲ ಸೃಷ್ಟಿಸುತ್ತಿದ್ದು, ಅದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಸದ್ಯದಲ್ಲೇ ಇದಕ್ಕೆಲ್ಲ ತೆರೆ ಎಳೆಯುತ್ತೇವೆ. ಸದ್ಯದಲ್ಲಿಯೇ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಲಿದ್ದು, ಅದರಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿಯ ಹೆಸರೂ ಇರಲಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.