
ಪ್ರಜಾವಾಣಿ ವಾರ್ತೆ
ಕನಕಪುರ: ಜಮೀನಿಗೆ ತೆರಳುತ್ತಿದ್ದ ಅಕ್ಕ-ತಂಗಿ ಮೇಲೆ ಕಾಡಾನೆ ನಡೆಸಿದ ದಾಳಿಯಲ್ಲಿ ಜಯಮ್ಮ(50) ಎಂಬುವರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಅಚ್ಚಲು ಗ್ರಾಮದ ಇಂದಿರಾನಗರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಘಟನೆಯಲ್ಲಿ ಜಯಮ್ಮ ಅವರ ತಂಗಿ ವೆಂಕಟ ಲಕ್ಷ್ಮಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಬೆಳಿಗ್ಗೆ ಎಳ್ಳು ಕೊಯ್ಯಲು ಜಮೀನಿಗೆ ಹೋಗುತ್ತಿದ್ದಾಗ ಒಂಟಿ ಸಲಗ ದಾಳಿ ನಡೆಸಿದೆ.
ವಿಷಯ ತಿಳಿಯುತ್ತಿದ್ದಂತೆ, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.