ADVERTISEMENT

ಡಿಕ್ಕಿ: ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 2:45 IST
Last Updated 7 ಜನವರಿ 2026, 2:45 IST

ಕನಕಪುರ: ಸ್ಕೂಲ್ ಬಸ್‌ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಮನಗರ ತಾಲ್ಲೂಕು ಕೂಟಗಲ್ ಗ್ರಾಮದ ಶಿವರುದ್ರ ಅವರ ಪತ್ನಿ ತುಳಸಿ (24) ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆ. ಪತಿ ಶಿವರುದ್ರ ಅವರ ಜತೆಯಲ್ಲಿ ಸೋಮವಾರ ಬೈಕ್‌ನಲ್ಲಿ ದುನ್ನಸಂದ್ರ ಗ್ರಾಮಕ್ಕೆ ಹೋಗುತ್ತಿದ್ದಾಗ ಕಲ್ಲಹಳ್ಳಿ ಸಮೀಪ ಎದುರುಗಡೆಯಿಂದ ಬಂದ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ.

ಶಿವರುದ್ರ ಅವರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ತುಳಸಿ ಕೆಳಗೆ ಬಿದ್ದು ಅತಿಯಾದ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ADVERTISEMENT

ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.