ADVERTISEMENT

ರಾಮನಗರ| ಸ್ತ್ರೀ ಸ್ವಾವಲಂಬನೆಗೆ ಸಂಘಟನೆ ಅಗತ್ಯ: ಶಿವಮಾದು ಸಲಹೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 2:57 IST
Last Updated 13 ಜನವರಿ 2026, 2:57 IST
<div class="paragraphs"><p>ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ಕೃಷ್ಣಾಪುರದೊಡ್ಡಿಯಲ್ಲಿರುವ ತಾನಿನಾ ರಂಗದಂಗಳದಲ್ಲಿ ಶಾಂತಾಲಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೋಮವಾರ ಮಾತೆ ಜೀಜಾಬಾಯಿ ಹಾಗೂ ಸ್ವಾಮಿ ವಿವೇಕಾನಂದ ಜಯಂತ್ಯುತ್ಸವ ಆಚರಿಸಲಾಯಿತು.</p></div>

ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ಕೃಷ್ಣಾಪುರದೊಡ್ಡಿಯಲ್ಲಿರುವ ತಾನಿನಾ ರಂಗದಂಗಳದಲ್ಲಿ ಶಾಂತಾಲಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೋಮವಾರ ಮಾತೆ ಜೀಜಾಬಾಯಿ ಹಾಗೂ ಸ್ವಾಮಿ ವಿವೇಕಾನಂದ ಜಯಂತ್ಯುತ್ಸವ ಆಚರಿಸಲಾಯಿತು.

   

ರಾಮನಗರ: ‘ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಆದರೂ, ಮತ್ತಷ್ಟು ಸ್ವಾವಲಂಬನೆ ಸಾಧಿಸುವ ಅಗತ್ಯವಿದೆ. ಅದಕ್ಕಾಗಿ ಒಗ್ಗೂಡಿ ಸಂಘ ಕಟ್ಟುವ ಮೂಲಕ ಸ್ವ ಉದ್ಯೋಗ ಮಾಡಿ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು’ ಎಂದು ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶಿವಮಾದು ಸಲಹೆ ನೀಡಿದರು.

ತಾಲ್ಲೂಕಿನ ಕೈಲಾಂಚ ಹೋಬಳಿಯ ಕೃಷ್ಣಾಪುರದೊಡ್ಡಿಯಲ್ಲಿರುವ ತಾನಿನಾ ರಂಗದಂಗಳದಲ್ಲಿ ಶಾಂತಾಲಾ ಚಾರಿಟೇಬಲ್ ಟ್ರಸ್ಟ್ ಸೋಮವಾರ ಹಮ್ಮಿಕೊಂಡಿದ್ದ ಮಾತೆ ಜೀಜಾಬಾಯಿ ಹಾಗೂ ಸ್ವಾಮಿ ವಿವೇಕಾನಂದ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ADVERTISEMENT

‘ಛತ್ರಪತಿ ಶಿವಾಜಿ ಮಹಾರಾಜರ ತಾಯಿ ಜೀಜಾಬಾಯಿ ಮಹಿಳೆಯರಿಗೆ ಆದರ್ಶಪ್ರಾಯರು. ಅವರಂತೆ ಮಹಿಳೆಯರು ತಮ್ಮ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ, ದೇಶಾಭಿಮಾನ ತುಂಬುವ ಕೆಲಸ ಮಾಡಬೇಕು. ಆಗ ಮಾತ್ರ ಮಕ್ಕಳು ಸಮಾಜದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ’ ಎಂದರು.

ಹುಣಸನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಮಾತನಾಡಿ, ‘ಚೈತನ್ಯದ ಚಿಲುಮೆಯಾಗಿದ್ದ ಸ್ವಾಮಿ ವಿವೇಕಾನಂದರು ಯುವ ಸಮೂಹಕ್ಕೆ ಪ್ರೇರಣಾ ಶಕ್ತಿಯಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಯುವ ಸಮೂಹ ಪಾಲಿಸಿ ಭಾರತೀಯ ಪರಂಪರೆ ಉಳಿಸಿ ಬೆಳೆಸಬೇಕು: ಎಂದು ತಿಳಿಸಿದರು.

ಟ್ರಸ್ಟಿನ ಸಂಸ್ಥಾಪಕ ಕಾರ್ಯದರ್ಶಿ ಕವಿತಾ ರಾವ್, ‘ರಾಜಮಾತೆ ಜೀಜಾಬಾಯಿ ಆದರ್ಶವನ್ನು ಮಹಿಳೆಯರು ಪಾಲಿಸಬೇಕು. ಶಿವಾಜಿ ಅವರು ಆದರ್ಶ ಹಿಂದೂ ರಾಷ್ಟ್ರವನ್ನು ಸ್ಥಾಪಿಸಿದರು. ಅದಕ್ಕಾಗಿ ರಾಜಮಾತೆ ಜೀಜಾಬಾಯಿ ಅವರು ಶಿವಾಜಿ ಅವರಿಗೆ ಬಾಲ್ಯದಲ್ಲೇ ಅಂತಹ ಸಂಸ್ಕಾರ ಕಲಿಸಿದರು. ಧರ್ಮಾಭಿಮಾನ ಹಾಗೂ ರಾಷ್ಟ್ರಾಭಿಮಾನ ಬಿತ್ತಿದರು’ ಎಂದರು.

ಅಕ್ರಾ ಸೆಟ್ ಸಂಸ್ಥೆಯ ಟಿ.ಎಸ್. ಸಿದ್ದೇಗೌಡ, ಕ್ಷತ್ರಿಯ ಮರಾಠ ಸೇವಾ ಸಂಘದ ಅಧ್ಯಯಕ್ಷ ಸ್ವಾಮಿ ರಾವ್, ಪದಾಧಿಕಾರಿಗಳಾದ ಗಣೇಶ್ ರಾವ್, ಚಂದ್ರಾಬಾಯಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.