ADVERTISEMENT

ಮಹಿಳಾ ಉದ್ಯಮಿಗಳಿಂದ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 3:04 IST
Last Updated 14 ಫೆಬ್ರುವರಿ 2026, 3:04 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಪ್ರಜಾವಾಣಿ ವಾರ್ತೆ

ರಾಮನಗರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆ್ಯಪ್‌ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಜ. 9ರಿಂದ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆ್ಯಪ್ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಡಿಜಿಟಲ್ ಮಾರ್ಕೆಟಿಂಗ್ ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಮಹಿಳಾ ಉದ್ಯಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ADVERTISEMENT

ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು, ಎನ್‌ಆರ್‌ಎಲ್‌ಎಂ ಫಲಾನುಭವಿಗಳು, ಎನ್‌ಆರ್‌ಎಲ್‌ಎಂ ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕರ್ನಾಟಕ ಸ್ಮಾಲ್ ಸ್ಕೇಲ್ ಇಂಡಸ್ಟ್ರೀಸ್ ಅಸೋಸಿಯೇಷನ್ (ಕೆಎಎಸ್‌ಎಸ್‌ಐಎ) ಘಟಕಗಳ ಮಹಿಳಾ ಉದ್ಯಮಿಗಳು, ಆರ್‌ಯುಡಿಎಸ್‌ಇಟಿಐ/ ಆರ್‌ಎಸ್‌ಇಟಿಐ ಮೂಲಕ ತರಬೇತಿ ಪಡೆದು ಸ್ವಉದ್ಯೋಗ ನಡೆಸುತ್ತಿರುವ ಮಹಿಳೆಯರು, ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯಶಸ್ವಿ ಮಹಿಳಾ ಉದ್ಯಮಿಗಳು, ಸರ್ಕಾರದ ವಿವಿಧ ಯೋಜನೆಗಳಡಿ ಪ್ರಯೋಜನ ಪಡೆದ ಮಹಿಳಾ ಉದ್ಯಮಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಆಸಕ್ತ ಮಹಿಳಾ ಉದ್ಯಮಿಗಳು ತಮ್ಮ ಹೆಸರು ವಿಳಾಸ, ಉತ್ಪನ್ನ ಮಾಡುವ ವಸ್ತುಗಳ ವಿವರ, ದೂರವಾಣಿ ಸಂಖ್ಯೆ, ಉತ್ಪನ್ನಗಳ ಭಾವಚಿತ್ ಒಳಗೊಂಡ ಅರ್ಜಿ ಹಾಗೂ ಸೂಕ್ತ ದಾಖಲೆಗಳನ್ನು ಅಭಿವೃದ್ದಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ ಈ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ತಾಲ್ಲೂಕು ಮಟ್ಟದಲ್ಲಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ಜಿಲ್ಲಾ ಮಟ್ಟದಲ್ಲಿ ಉಪ ನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಪಂಚಾಯಿತಿ ಭವನ, 2ನೇ ಮಹಡಿ, ಬಿ.ಎಂ. ರಸ್ತೆ, ಬೆಂಗಳೂರು ದಕ್ಷಿಣ ಜಿಲ್ಲೆ. ಇಲ್ಲಿ ಮಹಿಳಾ ಅಭಿವೃದ್ದಿ ನಿಗಮದ ಅಭಿವೃದ್ದಿ ನಿರೀಕ್ಷಕರನ್ನು ಅಥವಾ ಮೊಬೈಲ್ ಸಂಖ್ಯೆ: 94802 21411 ಸಂಪರ್ಕಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.