ADVERTISEMENT

ರಾಮನಗರ: ಮಹಿಳೆಯರಿಗೆ ಆರ್ಥಿಕ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳಡಿ ಆರ್ಥಿಕ ನೆರವು

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 4:11 IST
Last Updated 6 ಡಿಸೆಂಬರ್ 2025, 4:11 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ರಾಮನಗರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು ಈ ಕೆಳಗಿನಂತಿವೆ.

ಉದ್ಯೋಗಿನಿ ಯೋಜನೆ: ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕಿನಿಂದ ₹3 ಲಕ್ಷದವರೆಗೆ ಸಾಲ ಮತ್ತು ನಿಗಮದಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ 50ರಷ್ಟು ಸಹಾಯಧನ ಹಾಗೂ ಸಾಮಾನ್ಯ ವರ್ಗದವರಿಗೆ ಶೇ 30ರಷ್ಟು ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸುವವರ ವಯೋಮಿತಿ 18 ರಿಂದ 55 ವರ್ಷ ಇರಬೇಕು.

ADVERTISEMENT

ಚೇತನ ಯೋಜನೆ: ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ₹30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು. ಫಲಾನುಭವಿಯು ಸಮುದಾಯ ಆಧಾರಿತ ಸಂಸ್ಥೆಯಲ್ಲಿ ನೋಂದಣಿಯಾಗಿರಬೇಕು.

ಧನಶ್ರೀ ಯೋಜನೆ: ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ₹30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ. ವಯೋಮಿತಿ 18ರಿಂದ 60 ವರ್ಷ. ಫಲಾನುಭವಿಯು ಎ.ಆರ್.ಟಿ ಕೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ನೋಂದಣಿಯಾಗಿರಬೇಕು.

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ: ಆದಾಯ ಉತ್ಪನ್ನ ಕೈಗೊಳ್ಳಲು ₹30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ. ಫಲಾನುಭವಿಯು ಸಮುದಾಯ ಆಧಾರಿತ ಸಂಸ್ಥೆಯಲ್ಲಿ ನೋಂದಣಿಯಾಗಿರಬೇಕು.

ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಯೋಜನಾ ವರದಿ, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ವಯಸ್ಸಿನ ದೃಢೀಕರಣ ಪತ್ರ, ವಾಸ ದೃಢೀಕರಣ ಪತ್ರ, ಬ್ಯಾಂಕ್ ಪಾಸ್‌ ಪುಸ್ತಕ, ವಿಧವೆ ಅಥವಾ ಅಂಗವಿಕಲರಾಗಿದ್ದಲ್ಲಿ ದೃಢೀಕರಣ ಪತ್ರ ಸಲ್ಲಿಸಬೇಕು.

ಉದ್ಯೋಗಿನಿ ಯೋಜನೆಯಡಿ ಎಸ್‌ಸಿಪಿ ಮತ್ತು ಟಿಎಸ್‌ಪಿ ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು ಸಹಾ ಸೇವಾ ಸಿಂಧು ಪೋರ್ಟಲ್‌ನ್ಲೇ ಅರ್ಜಿ ಸಲ್ಲಿಸಬೇಕು.

ಅರ್ಜಿದಾರರು ಈ ಎಲ್ಲಾ ಯೋಜನೆಗಳಿಗೆ ಅರ್ಜಿಯನ್ನು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು https://sevasindhu.karnataka.gov.in ಮೂಲಕ ಡಿ. 15ರ ಸಂಜೆ 5.30ರೊಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ದಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ಜಿಲ್ಲಾ ಪಂಚಾಯಿತಿ ,2ನೇ ಮಹಡಿ, ರಾಮನಗರ ಹಾಗೂ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯ ತಾಲ್ಲೂಕು ಮಟ್ಟದ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.