
ಮಾಗಡಿ: ರೋಟರಿ ಮಾಗಡಿ ಸೆಂಟ್ರಲ್ ಮತ್ತು ವಿದ್ಯಾಸರಸ್ವತಿ ಚಾರಿಟೆಬಲ್ ಟ್ರಸ್ಟ್ ಆಯೋಜಿಸಿದ್ದ ಉಚಿತ ಟೈಲರಿಂಗ್, ಬ್ಯೂಟಿ ಪಾರ್ಲರ್, ಜರಿ ಮತ್ತು ಆರಿ ವರ್ಕ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ರೋಟರಿ ಮಾಗಡಿ ಸೆಂಟ್ರಲ್ ಅಧ್ಯಕ್ಷ ಡಾ.ಮಂಜುನಾಥ್ ಬೆಟಗೇರಿ, ಮಹಿಳೆಯರು ಈ ತರಬೇತಿ ಮೂಲಕ ಸ್ವಯಂ ಉದ್ಯೋಗಿ ಆಗಿ ಆರ್ಥಿಕ ಸ್ವಾತಂತ್ರ್ಯ ಗಳಿಸಬೇಕು ಎಂದರು.
ರೋಟರಿ ಪ್ರಭಾಕರ್, ಕಾರ್ಯದರ್ಶಿ ಶಂಕರಮೂರ್ತಿ, ಈ ಕೌಶಲ ತರಬೇತಿಯು ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಸ್ವಾವಲಂಬನೆಗೆ ನೆರವಾಗುತ್ತದೆ ಎಂದು ತಿಳಿಸಿದರು.
ತಾಲೂಕಿನ 70ಕ್ಕೂ ಹೆಚ್ಚು ಮಹಿಳೆಯರು ಒಂದು ತಿಂಗಳ ಉಚಿತ ತರಬೇತಿಯಲ್ಲಿ ಭಾಗವಹಿಸಿದ್ದರು. ತರಬೇತಿ ಪೂರ್ಣಗೊಂಡವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ರೋಟರಿ ಜಿಲ್ಲಾ ಹಾಗೂ ಸ್ಥಳೀಯ ಅಧಿಕಾರಿಗಳು, ಟ್ರಸ್ಟ್ ಪ್ರತಿನಿಧಿಗಳು ಮತ್ತು ಸದಸ್ಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.