ADVERTISEMENT

ಚನ್ನಪಟ್ಟಣ: ವಿಶ್ವ ಗುಬ್ಬಚ್ಚಿ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2025, 15:51 IST
Last Updated 21 ಮಾರ್ಚ್ 2025, 15:51 IST
ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮ ಪಂಚಾಯಿತಿ ಅರಿವು ಕೇಂದ್ರ ಗ್ರಂಥಾಲಯದಲ್ಲಿ ‘ವಿಶ್ವ ಗುಬ್ಬಚ್ಚಿ ದಿನದ’ ಅಂಗವಾಗಿ ಮಕ್ಕಳು ಗುಬ್ಬಚ್ಚಿ ಚಿತ್ರ ಬಿಡಿಸಿ ಸಂಭ್ರಮಿಸಿದರು
ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮ ಪಂಚಾಯಿತಿ ಅರಿವು ಕೇಂದ್ರ ಗ್ರಂಥಾಲಯದಲ್ಲಿ ‘ವಿಶ್ವ ಗುಬ್ಬಚ್ಚಿ ದಿನದ’ ಅಂಗವಾಗಿ ಮಕ್ಕಳು ಗುಬ್ಬಚ್ಚಿ ಚಿತ್ರ ಬಿಡಿಸಿ ಸಂಭ್ರಮಿಸಿದರು   

ಚನ್ನಪಟ್ಟಣ: ‘ವಿಶ್ವ ಗುಬ್ಬಚ್ಚಿ ದಿನದ’ ಅಂಗವಾಗಿ ತಾಲ್ಲೂಕಿನ ದಶವಾರ ಗ್ರಾಮ ಪಂಚಾಯಿತಿ ಅರಿವು ಕೇಂದ್ರ ಗ್ರಂಥಾಲಯದಲ್ಲಿ ಗುರುವಾರ ಮಕ್ಕಳು ಪಕ್ಷಿಗಳಿಗೆ ಆಹಾರ ಮತ್ತು ನೀರು ಕೊಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.

ಗ್ರಂಥಾಲಯ ಮೇಲ್ವಿಚಾರಕ ಡಿ.ಸಿ.ಶಿವಲಿಂಗಯ್ಯ ಮಾತನಾಡಿ, ಗುಬ್ಬಚ್ಚಿಗಳು ನಮ್ಮ ಮನೆಯ ಸುತ್ತಲಿನ ಪರಿಸರದಲ್ಲಿ ತಮ್ಮ ಗೂಡು ಕಟ್ಟಿಕೊಂಡು ಚಿಲಿಪಿಲಿ ಶಬ್ದ ಮಾಡುವ ಸುಂದರ ಪಕ್ಷಿಗಳಾಗಿವೆ. ಪುಟಾಣಿ ಮಕ್ಕಳಿಗೆ ಇವು ತುಂಬಾ ಇಷ್ಟವಾಗುತ್ತವೆ. ಅಳಿವಿನಂಚಿನಲ್ಲಿರುವ ಇಂತಹ ಪಕ್ಷಿ ಸಂಕುಲವನ್ನು ರಕ್ಷಣೆ ಮಾಡಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಗ್ರಾ.ಪಂ. ಪಿಡಿಒ ಸಿದ್ದರಾಮ ಯರಗಲ್ ಮಾತನಾಡಿ, ಸಿಎಂಸಿಎ ಸಂಸ್ಥೆಯ ಗ್ರಂಥಾಲಯ ಕಾರ್ಯಕ್ರಮದ ಪ್ರೇರಣೆಯಿಂದ ಮಕ್ಕಳು ನಿರಂತರವಾಗಿ ಗ್ರಂಥಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಮಕ್ಕಳ ವ್ಯಕ್ತಿತ್ವ ಬೆಳವಣಿಗೆ ಹಾಗೂ ಜ್ಞಾನ ವಿಸ್ತಾರದ ದೃಷ್ಟಿಯಿಂದ ಇದು ಉತ್ತಮ ಬೆಳವಣಿಗೆಯಾಗಿದೆ. ಬೇಸಿಗೆ ರಜೆಯಲ್ಲೂ ಕೂಡ ಮಕ್ಕಳು ಗ್ರಂಥಾಲಯಕ್ಕೆ ನಿಯಮಿತವಾಗಿ ಭೇಟಿ ನೀಡುವ ಮೂಲಕ ಜ್ಞಾನ ಹಾಗೂ ಸಾಮಾನ್ಯ ಜ್ಞಾನ ಹೆಚ್ವಿಸಿಕೊಳ್ಳಲು ಹೆಚ್ಚಿನ ಒತ್ತು ನೀಡಲಿ ಎಂದು ಸಲಹೆ ನೀಡಿದರು.

ADVERTISEMENT

ಮಕ್ಕಳು ಗುಬ್ಬಚ್ಚಿ ಚಿತ್ರ ಬಿಡಿಸುವುದರ ಮೂಲಕ ಸಂಭ್ರಮ ವ್ಯಕ್ತಪಡಿಸಿದರು. ಗ್ರಾಮದ ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.