ಚನ್ನಪಟ್ಟಣ: ಪಿಯು ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅಪ್ಪಗೆರೆ ಸೇಂಟ್ ಆನ್ಸ್ ಬಾಲಕಿಯರ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕನಕಪುರ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಡೆದ ಪಿಯು ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಿತು. ಯೋಗ ಸ್ಪರ್ಧೆ ವಿಭಾಗದಲ್ಲಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆರ್. ಸೋನಿಕಾ ವೈಯಕ್ತಿಕವಾಗಿ ಪ್ರಥಮಸ್ಥಾನ ಪಡೆದಿದ್ದಾರೆ. ಎಸ್. ದೀಕ್ಷಾ ಜೊತೆ ಯೋಗ ಡಬಲ್ಸ್‌ನಲ್ಲಿ ಪ್ರಥಮಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿನಿಯರನ್ನು ಸೇಂಟ್ ಆನ್ಸ್ ವಿದ್ಯಾಸಂಸ್ಥೆಯ ಚನ್ನಪಟ್ಟಣ ಶಾಖೆಯ ವ್ಯವಸ್ಥಾಪಕಿ ಸಿಸ್ಟರ್ ಆಲ್ಫೋನ್ಸ್, ಪ್ರಾಂಶುಪಾಲೆ ಸಿಸ್ಟರ್ ರಿನ್ಸಿ ಜೋಸೆಫ್, ಉಪನ್ಯಾಸಕರು, ಸಿಬ್ಬಂದಿ ವರ್ಗ, ಪೋಷಕರು, ವಿದ್ಯಾರ್ಥಿನಿಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.