ರಾಮನಗರ: ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ವೇ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ವ್ಹೀಲಿಂಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ದರ್ಶನ್ ಎಂಬ ಯುವಕನನ್ನು ಬಿಡದಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ತಾಲ್ಲೂಕಿನ ಬಾನಂದೂರು ಗ್ರಾಮದ ದರ್ಶನ್, ಕೆಲ ದಿನಗಳ ಹಿಂದೆ ಕೇತಗಾನಹಳ್ಳಿ ಬಳಿ ತನ್ನ ಡಿಯೊ ಸ್ಕೂಟರ್‌ನಲ್ಲಿ ವ್ಹೀಲಿಂಗ್ ಮಾಡಿದ್ದ ದರ್ಶನ್, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ.
ದರ್ಶನ್ ಪೋಸ್ಟ್ ಮಾಡಿದ್ದ ವಿಡಿಯೊ ಗಮನಿಸಿ, ಆತನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.