ಮಾಗಡಿ: ಮನೆ ಚಾವಣಿ ಮೇಲಿದ್ದ ಮಳೆ ನೀರು ಸ್ವಚ್ಛಗೊಳಿಸಲು ಹೋಗಿದ್ದ ಕೆ.ಸಿ.ಚಂದ್ರಪ್ಪ (34) ಆಕಸ್ಮಿಕವಾಗಿ ಏಣಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
ಪಟ್ಟಣದ ಕೋಟಪ್ಪನಾಳ್ಯದ ಚಂದ್ರಪ್ಪ (34) ಮೃತರು. ಸೋಮವಾರ ರಾತ್ರಿ ಸುರಿದ ಮಳೆಯಿಂದ ಮನೆ ಚಾವಣಿಯಿಂದ ನೀರು ಸುರಿಯುತ್ತಿತ್ತು. ಇದನ್ನು ಸ್ವಚ್ಛಗೊಳಿಸಲು ಮಂಗಳವಾರ ಏಣಿ ಏರಿದ್ದು, ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಇದರಿಂದ ಕುಟುಂಬದ ರೋಧನ ಮುಗಿಲು ಮುಟ್ಟಿತ್ತು.
ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.