
ಪ್ರಜಾವಾಣಿ ವಾರ್ತೆ
ಕನಕಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಉಯ್ಯಂಬಳ್ಳಿ ಶ್ರೀರಾಮ ಸಾಗರ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಐ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಪ್ಪ ಗ್ರಾಮದ ಪ್ರಜ್ವಲ್ (23) ಮೃತ ಯುವಕ. ಕೋಡಿಹಳ್ಳಿ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಶನಿವಾರ ಬೆಳಗ್ಗೆ ಬರುತ್ತಿದ್ದಾಗ ಬೈಕ್ ಗುದ್ದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪ್ರಜ್ವಲ್ ಅವರನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾರೆ.
ಕೋಡಿಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.