ADVERTISEMENT

ಯುವ ಜನರು ನಾಯಕತ್ವ ಗುಣಬೆಳೆಸಿಕೊಳ್ಳಿ: ಶಾಸಕ ಸಿ.ಪಿ.ಯೋಗೇಶ್ವರ್

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 2:03 IST
Last Updated 8 ಡಿಸೆಂಬರ್ 2025, 2:03 IST
ಬೊಂಬೆನಾಡ ಗಂಗೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಕ್ರಿಕೆಟ್ ಆಡುವುದರ ಮೂಲಕ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು
ಬೊಂಬೆನಾಡ ಗಂಗೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಕ್ರಿಕೆಟ್ ಆಡುವುದರ ಮೂಲಕ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು   

ಚನ್ನಪಟ್ಟಣ: ಗ್ರಾಮೀಣ ಭಾಗದ ಯುವಕರು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ಗುಣ ಬೆಳೆಸಿಕೊಂಡು ಮನಸ್ಸು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಕಿವಿಮಾತು ಹೇಳಿದರು.

ತಾಲ್ಲೂಕಿನ ನಾಗವಾರ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೇವೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬೊಂಬೆನಾಡ ಗಂಗೋತ್ಸವ, ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ, ಜಾನಪದ ಗೀತ ಗಾಯನ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಿ, ಕ್ರಿಕೆಟ್ ತಂಡಗಳಿಗೆ ಕಿಟ್ ವಿತರಿಸಿ ಮಾತನಾಡಿದರು.

ಗೌಡಗೆರೆ ಚಾಮುಂಡೇಶ್ವರಿ ಬಸವಪ್ಪ ಕ್ಷೇತ್ರದ ಧರ್ಮಾಧಿಕಾರಿ ಡಾ.ಮಲ್ಲೇಶ್ ಗುರೂಜಿ ಮಾತನಾಡಿ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಹೆಚ್ಚುತ್ತದೆ. ಯುವ ಸಮೂಹ ಇಂತಹ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಕೆಟ್ಟ ಆಲೋಚನೆ ದೂರ ಮಾಡಿಕೊಳ್ಳಬೇಕು ಎಂದರು.

ADVERTISEMENT

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕರಣ್ ಎಂ.ಆನಂದ್ ಮಾತನಾಡಿದರು. ಕೆಪಿಸಿಸಿ ಕಾರ್ಯದರ್ಶಿ ದುಂತೂರು ವಿಶ್ವನಾಥ್, ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಅಧ್ಯಕ್ಷ ರಘುನಂದನ್ ರಾಮಣ್ಣ, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ಅರ್.ಪ್ರಮೋದ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಕುಮಾರ್, ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ರಮೇಶ್ ಮ್ಯೆಲನಾಯಕನಹೊಸಹಳ್ಳಿ, ಮುಖಂಡರಾದ ಆರ್.ಎಂ.ಮಲುವೇಗೌಡ, ಎ.ಸಿ.ವಿರೇಗೌಡ, ಮುದ್ದುಕೃಷ್ಣ, ರೇವಣ್ಣಮ ಸತೀಶ್ ಬಾಬು, ಪಿ.ಡಿ.ರಾಜು, ಭಾಸ್ಕರ್, ನಾಗವಾರ ಅಭಿ, ನಾಗವಾರಸ್ವಾಮಿ, ಶಂಕರ್, ಲೋಕೇಶ್ ಇತರರು ಭಾಗವಹಿಸಿದ್ದರು.

ಹೊಂಗನೂರು, ಕೋಡಂಬಹಳ್ಳಿ, ಅಕ್ಕೂರು, ಮಳೂರು ಜಿಲ್ಲಾ ಪಂಚಾಯಿತಿ ಹಾಗೂ ನಗರ ವ್ಯಾಪ್ತಿಯಲ್ಲಿ ಬೊಂಬೆನಾಡ ಗಂಗೋತ್ಸವಕ್ಕೆ ಚಾಲನೆ ನೀಡಲಾಯಿತು. ಆಯಾ ಭಾಗದ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.