ADVERTISEMENT

ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಇಲ್ಲ

ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಆಯನೂರು ಮಂಜುನಾಥ ಟೀಕೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2018, 9:23 IST
Last Updated 7 ಮಾರ್ಚ್ 2018, 9:23 IST

ಶಿಕಾರಿಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಡಳಿತದಲ್ಲಿ ಅತಿಥಿ ಉಪನ್ಯಾಸಕರಿಗೆ ಹಾಗೂ ನೌಕರರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ ಟೀಕಿಸಿದರು.

ಪಟ್ಟಣದಲ್ಲಿ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ 6ನೇ ವೇತನ ಆಯೋಗ ಮಾಡಿರುವ ಶಿಫಾರಸನ್ನು ಜಾರಿ ಮಾಡಿದೆ. ಆದರೆ, ಮೇಲ್ನೋಟಕ್ಕೆ ಶೇ 30ರಷ್ಟು ವೇತನ ಏರಿಕೆಯಾದಂತೆ ಕಂಡುಬಂದರೂ ವಾಸ್ತವದಲ್ಲಿ
ಶೇ 7ರಷ್ಟು ಮಾತ್ರ ಹೆಚ್ಚಿನ ವೇತನವನ್ನು ನೌಕರರು ಪಡೆಯಲಿದ್ದಾರೆ ಎಂದು ಹೇಳಿದರು.

ADVERTISEMENT

ಸಂಸದ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೌಕರರ ಪರವಾದ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಬಿಜೆಪಿ ಆಡಳಿತದಲ್ಲಿ ಶೈಕ್ಷಣಿಕ ಕ್ಷೇತ್ರ, ನೌಕರರ ಹಾಗೂ ಪದವೀಧರರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿತ್ತು. ವಿಧಾನಸಭೆ ಚುನಾವಣೆ ನಂತರ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನೌಕರರ ಹಾಗೂ ಪದವೀಧರರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಬಿ.ವೈ.ರಾಘವೇಂದ್ರ ಮಾತನಾಡಿ, ‘ಲೋಕಸಭಾ ಹಾಗೂ ರಾಜ್ಯಸಭೆ ಸದಸ್ಯರಾಗಿ, ಜಿಲ್ಲೆಯ ಧ್ವನಿಯಾಗಿ ಆಯನೂರು ಮಂಜುನಾಥ ಕಾರ್ಯನಿರ್ವಹಿಸಿದ್ದಾರೆ. ಪದವೀಧರರ ಧ್ವನಿಯಾಗಲು ಪಕ್ಷ ಅವಕಾಶ ಒದಗಿಸಿದೆ. ಪದವೀಧರರು ಹಾಗೂ ನೌಕರರನ್ನು ಗೌರವದಿಂದ ಬಿಜೆಪಿ ನಡೆಸಿಕೊಂಡಿದ್ದು, ಆಯನೂರು ಮಂಜುನಾಥಹಾಗೂ ಗಣೇಶ್‌ ಕಾರ್ಣಿಕ್‌ ಅವರನ್ನು ಗೆಲ್ಲಿಸಲು ಶ್ರಮಿಸಬೇಕು’ ಎಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಗುರುಮೂರ್ತಿ ಮಾತನಾಡಿ, ‘ಆಯನೂರು ಮಂಜುನಾಥ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸಂಘಟನೆಯಲ್ಲಿ, ಕಾರ್ಮಿಕ ನಾಯಕರಾಗಿ ಹಾಗೂ ಬಗರ್‌ಹುಕುಂ ಸಾಗುವಳಿದಾರರ ಪರ ಹೋರಾಟ ನಡೆಸಿದ್ದಾರೆ. ಹೋರಾಟದ ವ್ಯಕ್ತಿತ್ವವನ್ನು  ಬೆಳೆಸಿಕೊಂಡಿದ್ದಾರೆ. ಪದವೀಧರರ ಕ್ಷೇತ್ರಕ್ಕೆ ಸ್ಪರ್ಧಿಸಿದ ಮಂಜುನಾಥ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದರು.

ಮುಖಂಡರಾದ ಕೆ.ಶೇಖರಪ್ಪ, ಕೆ.ಹಾಲಪ್ಪ, ರಾಮಾನಾಯ್ಕ, ಡಿ.ಟಿ.ಮೇಘರಾಜ್‌, ತೊಗರ್ಸಿ ಸಣ್ಣಹನುಮಂತಪ್ಪ, ರೇವಣಪ್ಪ, ತಾಳಗುಂದ ಸತೀಶ್‌, ಅಗಡಿ ಅಶೋಕ್, ಚಾರಗಲ್ಲಿ ಪರಶುರಾಮ್‌, ಕೆ.ಪಿ.ಮಂಜುನಾಥ್‌, ಗಾಯತ್ರಿದೇವಿ, ಕೆ.ಜಿ.ವಸಂತಗೌಡ್ರು ಅವರೂ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.