ಹೊಸನಗರ: ತಾಲ್ಲೂಕಿನ ಯಡೂರು- ಸುಳುಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅತಿವೃಷ್ಟಿ ಪರಿಣಾಮದ ಸಮೀಕ್ಷೆ ಮಾಡುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ತಾಲ್ಲೂಕು ಪಂಚಾಯ್ತಿ ಸದಸ್ಯ ಬಿ.ಇ. ಮಂಜುನಾಥ್ ದೂರಿದ್ದಾರೆ.
ಯಡೂರು-ಸುಳಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಾಡಿ, ಕೌರಿ, ಗಿಣಕಲ್ ಗ್ರಾಮಗಳಲ್ಲಿ ಬಾರಿ ಮಳೆಯಿಂದಾಗಿ ಕೃಷಿ ಭೂಮಿಗೆ ತಾಗಿಕೊಂಡಿರುವ ಧರೆಗಳು ಕುಸಿದ ಪರಿಣಾಮ ಜಮೀನು ಹಾಗೂ ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳಿಗೆ ಮೌಖಿಕ ಮತ್ತು ಲಿಖಿತವಾಗಿ ಮಾಹಿತಿ ನೀಡಲಾಗಿತ್ತು ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಆದರೆ, ಇಲ್ಲಿಯವರೆಗೆ ಕಂದಾಯ, ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳು ಭೇಟಿ ನೀಡಿ ಸಮೀಕ್ಷೆ ಮಾಡಿಲ್ಲ ಎಂದು ಅವರು ಆರೋಪಿಸಿದರು.
ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು. ಇಲ್ಲವಾದ ಪ್ರತಿಭಟನೆ ಅನಿವಾರ್ಯ ಎಂದು ಅವರು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.