ADVERTISEMENT

ಅಪ್ರತಿಮ ರಾಜಕೀಯ ಮುತ್ಸದ್ದಿ ಜಗಜೀವನರಾಂ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2013, 10:02 IST
Last Updated 6 ಏಪ್ರಿಲ್ 2013, 10:02 IST

ಸಾಗರ: ಬಾಬು ಜಗಜೀವನರಾಂ ದೇಶ ಕಂಡ ಅಪ್ರತಿಮ ರಾಜಕೀಯ ಮುತ್ಸದ್ದಿಯಾಗಿದ್ದು, ಅವರ ಆದರ್ಶ ಯುವಜನಾಂಗ ಪರಿಪಾಲನೆ ಮಾಡಬೇಕು ಎಂದು ತಹಶೀಲ್ದಾರ್ ಆರ್. ರಾಜಣ್ಣ ಹೇಳಿದರು.

ಇಲ್ಲಿನ ತಾಲ್ಲೂಕು ಆಡಳಿತದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಂ ಅವರ 106ನೇ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಹಸಿರು ಕ್ರಾಂತಿಯ ಹರಿಕಾರರಾದ ಡಾ.ಬಾಬು ಜಗಜೀವನರಾಂ ದೇಶದಲ್ಲಿ ಭವಿಷ್ಯದಲ್ಲಿ ಸಂಭವಿಸಬಹುದಾದ ಆಹಾರ ಕ್ಷಾಮ ವನ್ನು ಮನಗಂಡು ರೈತರ ಪುನಶ್ಚೇತನಕ್ಕೆ ವಿಶೇಷ ಒತ್ತು ನೀಡಿದವರು. ಅವರು ಉಪ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿದ್ದಾರೆ. ಅವರ ಜನ್ಮದಿನಾಚರಣೆ ಆಚರಿಸುವ ಮೂಲಕ ಅವರ ಆದರ್ಶವನ್ನು  ಅಳವಡಿಸಿಕೊಳಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಧರ, ಹಿಂದುಳಿದ ವರ್ಗಗಳ ಇಲಾಖೆಯ ಕೆ.ಬಿ. ಕೆಂಚಳ್ಳಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಯಮುನಪ್ಪ, ಪೌರಾಯುಕ್ತ ನರಸಿಂಹಮೂರ್ತಿ, ಸಹಾಯಕ ಕಷಿ ಅಧಿಕಾರಿ ಶಿವಕುಮಾರ್, ಶಿಶು ಅಭಿವದ್ಧಿ ಅಧಿಕಾರಿ ಸಿ. ಚಿದಾನಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.