ADVERTISEMENT

ಅಭಿವೃದ್ಧಿಯಲ್ಲಿ ಎಲ್ಲರ ಸಹಕಾರ ಅಗತ್ಯ: ಕಿಮ್ಮನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2017, 9:07 IST
Last Updated 14 ಅಕ್ಟೋಬರ್ 2017, 9:07 IST

ಕೋಣಂದೂರು: ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಜನಪ್ರತಿನಿಧಿಗಳು ಪಕ್ಷಪಾತ ಮಾಡಬಾರದು. ಊರಿನ ಏಳಿಗೆಗೆ ಎಲ್ಲರ ಸಹಕಾರ ಅಗತ್ಯ ಎಂದು ಶಾಸಕ ಕಿಮ್ಮನೆ ರತ್ನಾಕರ್ ಹೇಳಿದರು. ಸಮೀಪದ ತೋರೇಬೈಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕುಂಟೆಹೊಳೆಯಲ್ಲಿ ನಿರ್ಮಿಸಿರುವ ಕುಡಿಯುವ ನೀರಿನ ಟ್ಯಾಂಕ್ ಉದ್ಘಾಟಿಸಿ ಅವರು ಮಾತನಾಡಿದರು.

‘ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ರಾಜಕೀಯ ಮಾಡಿಲ್ಲ. 23 ಬಡ ಕೂಲಿ ಕಾರ್ಮಿಕರ ನೀರಿನ ದಾಹವನ್ನು ತೀರಿಸುವ ಪ್ರಯತ್ನ ಮಾಡಿದ್ದೇನೆ. ಜನರು ಅದನ್ನು ಸುವ್ಯವಸ್ಥಿತ ರೀತಿಯಲ್ಲಿ ಕಾಪಾಡಿಕೊಳ್ಳಬೇಕು.ಇಲ್ಲಿನ ಜನ ನನ್ನ ಮೇಲೆ ಇರಿಸಿರುವ ಪ್ರೀತಿಗೆ ನಾನು ಋಣಿ ’ಎಂದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಅಪೂರ್ವಾ ಶರಧಿ ಪೂರ್ಣೇಶ್, ತಾಲ್ಲೂಕು ಪಂಚಾಯ್ತಿ ಸದಸ್ಯ ಸಾಲೇಕೊಪ್ಪ ರಾಮಚಂದ್ರ, ತಾಲ್ಲೂಕು ಎ.ಪಿ.ಎಂ.ಸಿ.ಅಧ್ಯಕ್ಷ ಕೇಳೂರು ಮಿತ್ರ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಸ್.ಸಿ.ರವೀಂದ್ರ, ಗ್ರಾಮ ಪಂಚಾಯ್ತಿ ಸದಸ್ಯರಾದ ಚಂದ್ರಾವತಿ, ನಾಗರತ್ನ ಬಿಳುಗನ ಮನೆ, ಡಿ.ಟಿ.ರತ್ನಾಕರ್, ಸ್ಥಳೀಯರಾದ ಸೂಲದಮಕ್ಕಿ ಭಾಸ್ಕರ ಗೌಡ್ರು, ರವಿ ಹೆಗಡೆ, ಆನಂದ ಶೆಟ್ಟಿಗಾರ್, ಡಿ.ಪಿ.ವಿಶ್ವನಾಥ್, ಗೆಳೆಯರ ಬಳಗದ ಅಧ್ಯಕ್ಷ ಕೃಷ್ಣಮೂರ್ತಿ, ಕುಂಟೆಹೊಳೆ ಚಂದ್ರು ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.