ADVERTISEMENT

ಅಲ್ಪಸಂಖ್ಯಾತರ ಕಡೆಗಣನೆ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2018, 13:21 IST
Last Updated 18 ಜೂನ್ 2018, 13:21 IST
ಶಿವಮೊಗ್ಗದಲ್ಲಿ ಭಾನುವಾರ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ವಿಭಾಗದ ಪದಾಧಿಕಾರಿಗಳು ಜಿಲ್ಲಾ ಕಾಂಗ್ರೆಸ್ ಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಭಾನುವಾರ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ವಿಭಾಗದ ಪದಾಧಿಕಾರಿಗಳು ಜಿಲ್ಲಾ ಕಾಂಗ್ರೆಸ್ ಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಕಾಂಗ್ರೆಸ್ ಜಿಲ್ಲಾ ಘಟಕವು ಅಲ್ಪ ಸಂಖ್ಯಾತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ವಿಭಾಗದ ಪದಾಧಿಕಾರಿಗಳು ಜಿಲ್ಲಾ ಕಾಂಗ್ರೆಸ್ ಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ನಲ್ಲಿರುವ ಮುಖಂಡರು ಅಲ್ಪಸಂಖ್ಯಾತರನ್ನು ಕಡೆಗಣಿಸು ತ್ತಿರುವುದರಿಂದ ಬೇರೆ ಪಕ್ಷಗಳ ಕಡೆಗೆ ಒಲವು ತೋರುತ್ತಿದ್ದಾರೆ. ಇದರಿಂದ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ದೂರಿದರು.

ಆರ್.ಪ್ರಸನ್ನಕುಮಾರ ಹಾಗೂ ಮಂಜುನಾಥ ಭಂಡಾರಿ ಬೆಂಬಲಿಗರು, ಅಲ್ಪಸಂಖ್ಯಾತ ಮುಖಂಡರಿಗೆ ಮನ್ನಣೆ ನೀಡದೆ, ನಿಯಂತ್ರಿಸುತ್ತಿರುವುದರಿಂದ ಹಿರಿಯ ನಾಯಕರಿಗೆ ಮುಜುಗರವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತ ಮತಗಳು ಹಂಚಿಹೋಗದಂತೆ ಕೂಡಲೇ ತಡೆಯಬೇಕು. ಹಿರಿಯ ಮುಖಂಡರಿಗೆ ಪ್ರಾಧಾನ್ಯತೆ ನೀಡಬೇಕು ಎಂದು ಪದಾಧಿಕಾರಿಗಳು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ವಾಹಿದ್ ಅಡ್ಡು, ಕಾರ್ಯದರ್ಶಿ ರೆಹಮಾನ್ ಸಾಬ್ ಮತ್ತಿತರರು ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.