ADVERTISEMENT

‘ಅಹಿಂಸೆಯ ತತ್ವದಿಂದ ಎಲ್ಲರಿಗೂ ನೆಮ್ಮದಿ’

ಸಾಗರ ತಾಲ್ಲೂಕು ಕಚೇರಿಯಲ್ಲಿ ಮಹಾವೀರ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2018, 8:51 IST
Last Updated 30 ಮಾರ್ಚ್ 2018, 8:51 IST

ಸಾಗರ: ಸಮಾಜದ ಎಲ್ಲಾ ವರ್ಗದವರಿಗೆ ನೆಮ್ಮದಿ ತರುವ ಶಕ್ತಿ ಇರುವುದು ಅಹಿಂಸೆಯ ತತ್ವದಲ್ಲಿ ಎಂದು ಉಪವಿಭಾಗಾಧಿಕಾರಿ ನಾಗರಾಜ ಆರ್‌.ಸಿಂಗ್ರೇರ್‌ ಹೇಳಿದರು.

ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತ ಗುರುವಾರ ಏರ್ಪಡಿಸಿದ್ದ ಮಹಾವೀರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಹಿಂಸೆಯೇ ದೊಡ್ಡ ಧರ್ಮ ಎಂದು ಘೋಷಿಸಿದ ಮಹಾವೀರರ ತತ್ವಾದರ್ಶಗಳು ಸಮಾಜಕ್ಕೆ ಅನುಕರಣೀಯವಾಗಿವೆ ಎಂದರು.

ಜಾತಿ, ಉಪಜಾತಿಗಳನ್ನು ವಿರೋಧಿಸಿ ಸಮಷ್ಠಿ ಸಮಾಜ ನಿರ್ಮಾಣಕ್ಕೆ ಒತ್ತು ಕೊಟ್ಟಿದ್ದು ಭಗವಾನ್‌ ಮಹಾವೀರರ ವೈಶಿಷ್ಟ್ಯವಾಗಿದೆ. ಈ ಭೂಮಿಯ ಮೇಲಿನ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕು ಇದೆ ಎಂದು ಪ್ರತಿಪಾದಿಸಿದ ಕಾರಣಕ್ಕೆ ಮಹಾವೀರರ ಚಿಂತನೆ ಇಂದಿಗೂ ಪ್ರಸ್ತುತವಾಗಿದೆ ಎಂದರು.

ADVERTISEMENT

ತಹಶೀಲ್ದಾರ್‌ ತುಷಾರ್‌ ಬಿ.ಹೊಸೂರು, ಡಿವೈಎಸ್‌ಪಿ ಮಂಜುನಾಥ ಕವರಿ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್‌.ಕಲ್ಲಪ್ಪ ಹಾಜರಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಭಗವಾನ್‌ ಮಹಾವೀರರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.