ADVERTISEMENT

ಈಶ್ವರಪ್ಪ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ

ಸಿಬಿಐ ತನಿಖೆಗೆ ನಿರ್ದೇಶಿಸುವಂತೆ ಸುಪ್ರೀಂಕೋರ್ಟ್ ಮೊರೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2013, 5:46 IST
Last Updated 7 ಸೆಪ್ಟೆಂಬರ್ 2013, 5:46 IST

ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮನವಿ ಮಾಡಿ ಸುಪ್ರೀಂಕೋರ್ಟ್ ಮೊರೆ ಹೋಗುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ದೂರುದಾರ ವಕೀಲ ವಿನೋದ್ ತಿಳಿಸಿದರು.

ಈಶ್ವರಪ್ಪ ಅವರ ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಇನ್ನಷ್ಟು ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದ್ದು, ಈ ಬಗ್ಗೆ ಸಹವರ್ತಿ ವಕೀಲರೊಂದಿಗೆ ಸಮಾಲೋಚನೆ ನಡೆಸಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಕೆ.ಎಸ್.ಈಶ್ವರಪ್ಪ, ಪುತ್ರ ಕೆ.ಇ.ಕಾಂತೇಶ್, ಹಾಗೂ ಅವರ ಸೊಸೆ ವಿರುದ್ಧ ಅಕ್ರಮ ಸಂಪತ್ತು ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ 2012ರ ಡಿಸೆಂಬರ್‌ನಲ್ಲಿ ಶಿವಮೊಗ್ಗದ ಲೋಕಾಯುಕ್ತ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾಗ, ಪ್ರಕರಣದ ವಿಚಾರಣೆ  ನಡೆಸಿದ ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು ಎಂದರು.

ಪ್ರಕರಣ ಕೈಗೆತ್ತುಕೊಂಡ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಕಳೆದ 8 ತಿಂಗಳಿನಿಂದಲೂ ತನಿಖೆ ಕುಂಟುತ್ತಾ ಸಾಗಿದೆ. ತನಿಖಾಧಿಕಾರಿ ಆಗಿದ್ದ ಡಿವೈಎಸ್‌ಪಿ ಶ್ರೀಧರ್ ಅವರನ್ನು ವಗಾರ್ವಣೆ ಮಾಡಲಾಗಿದೆ. ಸರ್ಕಾರಿ ಅಭಿಯೋಜಕ ವಕೀಲರು ನ್ಯಾಯಾಲಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲಿ ವಾದವನ್ನೂ ಮಂಡಿಸುತ್ತಿಲ್ಲಿ ಕಾಂಗ್ರೆಸ್ ಸರ್ಕಾರ ಸಹ ಸೂಕ್ತ ತನಿಖೆಗೆ  ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್ ಮೊರೆ ಹೋಗುವ ಚಿಂತನೆ ಮಾಡಲಾಗಿದೆ ಎಂದು ಆರೋಪಿಸಿದರು.

ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ತಾನು ದಾಖಲಿಸಿರುವ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ದೂರನ್ನ ಹಿಂಪಡೆಯಲಾಗಿದೆ ಎಂಬ ಸುಳ್ಳು ಸುದ್ದಿ  ಹರಡಲಾಗುತ್ತಿದೆ. ತಾನು ಪ್ರಕರಣವನ್ನು ಹಿಂಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಈಶ್ವರಪ್ಪ ತಮ್ಮ ಮೇಲಿನ ಪ್ರಕರಣವನ್ನು ವಜಾಗೊಳಿಸುವಂತೆ ಹೈಕೋರ್ಟ್‌ನಲ್ಲಿ ಮನವಿ ಸಲಿಸ್ಲಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸಿದ ಸಂದರ್ಭದಲ್ಲಿ ಕೆ.ಎಸ್.ಈಶ್ವರಪ್ಪ ಉಪ ಮುಖ್ಯಮಂತ್ರಿ ಆಗಿದ್ದರು. ಜನಪ್ರತಿನಿಧಿ ಒಬ್ಬರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಅವಶ್ಯಕತೆ ಇದೆ. ಆದ್ದರಿಂದ ಅನುಮತಿ ಪಡೆದು ಪುನಃ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದೆ ಎಂದು ಹೇಳಿದರು.

ಪ್ರಕರಣ ದಾಖಲಿಸಿದ ತದನಂತರದಲ್ಲೂ ಅನುಮತಿ ಪತ್ರ ಸಲಿಸ್ಲಬಹುದು ಎಂದು ಭಾವಿಸಿದ್ದೆ. ಆದರೆ, ಕೋರ್ಟ್ ಅನುಮತಿ ಪಡೆದು ಪುನಃ ದೂರು ನೀಡುವಂತೆ ಹೇಳಿದೆ. ಆದ್ದರಿಂದ ಪುನಃ ದೂರು ನೀಡಲಾಗುವುದು. ಇನ್ನಷ್ಟು ಮಾಹಿತಿಗಳೂ, ದಾಖಲೆಗಳೂ ಸಿಕ್ಕಿವೆ. ಇಲಿನ್ಲ ಲೋಕಾಯುಕ್ತ ಸಿಬ್ಬಂದಿ ತನಿಖೆ ನಡೆಸುವುದರಲ್ಲಿ ವಿಳಂಬ ಆಗುತ್ತಿರುವುದರಿಂದ ಸಿಬಿಐ ತನಿಖೆಗೆ ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಲಾಗುವುದು ಎಂದರು.  ಸುದ್ದಿಗೋಷ್ಠಿಯಲ್ಲಿ ವಕೀಲರಾದ ಕೆ.ಪಿ ಶ್ರೀ ಪಾಲ್, ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.