ADVERTISEMENT

ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ವಿಫಲ: ಆರೋಪ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2017, 9:10 IST
Last Updated 25 ಅಕ್ಟೋಬರ್ 2017, 9:10 IST

ಸಾಗರ: ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಲ್ಲಿನ ಯುವ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸುಧಾಕರ ಕುಗ್ವೆ ಮಾತನಾಡಿ, ‘ಅಧಿಕಾರಕ್ಕೆ ಬರಬೇಕು ಎಂಬ ಹಂಬಲದಿಂದ ಕಳೆದ ಲೋಕಸಭೆ ಚುನಾವಣೆ ವೇಳೆಯಲ್ಲಿ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳು ವ್ಯಾಪಕ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವುದಾಗಿ ಯುವಜನರಿಗೆ ಭರವಸೆ ನೀಡಿದ್ದವು. ಕೇಂದ್ರ ಸರ್ಕಾರ ಜವಾಬ್ದಾರಿ ಮರೆತಿದೆ’ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ, ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳಿಂದ ಯುವಜನರಿಗೆ ಉದ್ಯೋಗ ದೊರಕುತ್ತಿಲ್ಲ. ಹೀಗಾಗಿ ಖಾಸಗಿ ಸಂಸ್ಥೆಗಳಲ್ಲಿ ಕಡಿಮೆ ಸಂಬಳಕ್ಕೆ ಯುವಜನರು ಕೆಲಸ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ದೂರಿದರು.

ADVERTISEMENT

ಯುವ ಕಾಂಗ್ರೆಸ್‌ನ ಜಿಲ್ಲಾ ಘಟಕದ ಕಾರ್ಯದರ್ಶಿ ಮಧು ಕುಗ್ವೆ, ತಾಲ್ಲೂಕು ಕಾರ್ಯದರ್ಶಿ ಕಿರಣ್‌ಕುಮಾರ್‌ ದೊಡ್ಮನಿ, ರಾಘವೇಂದ್ರ ಯಲಗಳಲೆ, ಉಪಾಧ್ಯಕ್ಷ ಶಶಿಧರ ಬಾಳೆಗುಂಡಿ, ಧರ್ಮಪ್ಪ, ಅಣ್ಣಪ್ಪ, ಬಾಲು, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಸದಸ್ಯ ಕೆ.ಸಿದ್ದಪ್ಪ, ಮಹಮ್ಮದ್ ಜಿಕ್ರಿಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.