ADVERTISEMENT

ಕಾಂಗ್ರೆಸ್‌ನಿಂದ ಅಭಿವೃದ್ಧಿ: ಖಾದರ್‌

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2014, 5:41 IST
Last Updated 19 ಮಾರ್ಚ್ 2014, 5:41 IST

ತೀರ್ಥಹಳ್ಳಿ: ಕಾಂಗ್ರೆಸ್‌ ಜನಸಾಮಾನ್ಯರ ಪಕ್ಷವಾಗಿದೆ. ಕಾಂಗ್ರೆಸ್‌ನಿಂದ ದೇಶದ  ಅಭಿವೃದ್ಧಿ ಸಾಧ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್‌ ಅಭಿಪ್ರಾಯಪಟ್ಟರು.

ಸೋಮವಾರ ತೀರ್ಥಹಳ್ಳಿಯ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು. ಕೇಂದ್ರ ಸರ್ಕಾರದ ಅನೇಕ ಜನಪರ ಯೋಜನೆಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ. ಮಾಹಿತಿ ಹಕ್ಕು, ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಶಿಕ್ಷಣ ಕ್ಷೇತ್ರದಲ್ಲಿನ ಪ್ರಗತಿ ಜನರ ಮುಂದಿದೆ ಎಂದರು.

ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಟಿ.ಎಲ್‌.ಸುಂದರೇಶ್‌, ಪಟಮಕ್ಕಿ ಮಹಾಬಲೇಶ್‌, ಮಾಜಿ ಶಾಸಕ ಪಟಮಕ್ಕಿ ರತ್ನಾಕರ್‌,   ಕೆಸ್ತೂರ್‌ ಮಂಜುನಾಥ್‌, ಹೊಸಳ್ಳಿ ಸುಧಾಕರ್‌, ಬಾಳೇಹಳ್ಳಿ ಪ್ರಬಾಕರ್‌, ಮಹಮದ್‌ ಜಫ್ರುಲ್ಲಾ ಇತರರು ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT