ADVERTISEMENT

ಕಾರ್ಮಿಕರು ತಮ್ಮ ಹಕ್ಕುಗಳ ಬಗ್ಗೆ ತಿಳಿಯಲಿ

​ಪ್ರಜಾವಾಣಿ ವಾರ್ತೆ
Published 4 ಮೇ 2018, 12:15 IST
Last Updated 4 ಮೇ 2018, 12:15 IST

ಶಿವಮೊಗ್ಗ: ಕಾರ್ಮಿಕರು ಕಾನೂನುಬದ್ಧವಾಗಿ ದೊರೆತಿರುವ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಆರ್.ಬಿ.ಧರ್ಮಗೌಡರ್ ತಿಳಿಸಿದರು.

ಶಿಮೂಲ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಶಿಮುಲ್‌ನ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಮಿಕರ ದಿನಾಚರಣೆ ಹಾಗೂ ಕಾರ್ಮಿಕರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಲಸದ ಸ್ಥಳದಲ್ಲಿ ಸುರಕ್ಷತೆ ಸೇರಿದಂತೆ ಕಾರ್ಮಿಕರ ಭದ್ರತೆಗೆ ಹಲವಾರು ಕಾಯ್ದೆಗಳನ್ನು ರೂಪಿಸಲಾಗಿದೆ. ಕಾರ್ಮಿಕರು ತಮ್ಮ ಹಕ್ಕುಗಳ ಕುರಿತು ಅರಿತುಕೊಂಡು ನ್ಯಾಯಬದ್ಧವಾಗಿ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಹೇಳಿದರು.

ADVERTISEMENT

ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ ಬಾದಾಮಿ ಮಾತನಾಡಿ, ‘ಕಾರ್ಮಿಕರು ತಮ್ಮ ಹಕ್ಕುಗಳ ರಕ್ಷಣೆಗಾಗಿ ಕಾನೂನು ಸೇವಾ ಪ್ರಾಧಿಕಾರವನ್ನು ಸಮೀಪಿಸಬಹುದು. ಕಾರ್ಮಿಕರಿಗೆ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ಒದಗಿಸಲಾಗುವುದು. ಕಾರ್ಮಿಕರು ತಮ್ಮ ಹಕ್ಕುಗಳ ಬಗ್ಗೆ ಅರಿವುಕೊಂಡು ಎಲ್ಲಾ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು’ ಎಂದು ಹೇಳಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಬಾಲಕೃಷ್ಣ, ಶಿಮುಲ್ ನೌಕರರ ಸಂಘದ ಅಧ್ಯಕ್ಷ ಕೇಶವಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಮಿಕ ಇನ್ಸ್‌ಪೆಕ್ಟರ್‌ ಬಿ.ಶಿವಕುಮಾರ್ ಕಾರ್ಮಿಕ ಕಾಯ್ದೆಗಳ ಬಗ್ಗೆ ಮಾತನಾಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಿ.ಎಂ.ರೇಖಾ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.