ADVERTISEMENT

ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2012, 19:42 IST
Last Updated 28 ನವೆಂಬರ್ 2012, 19:42 IST

ಸೊರಬ: ಮುಂದಿನ ವಿಧಾನಸಭಾ ಚುನಾವಣೆಗೆ ಸೊರಬ ಕ್ಷೇತ್ರದಿಂದ ಕುಮಾರ್ ಬಂಗಾರಪ್ಪ ಅವರೇ ಕಾಂಗ್ರೆಸ್ ಅಭ್ಯರ್ಥಿ ಎಂದು ಅಭ್ಯರ್ಥಿಗೆ ಆಯ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವೀಕ್ಷಕರ ಸಮ್ಮುಖದಲ್ಲಿ  ಬುಧವಾರ ಇಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ನಿರ್ಣಯಿಸಲಾಯಿತು.

ಕೆಪಿಸಿಸಿಯಿಂದ ನೇಮಕವಾದ ಜಿಲ್ಲಾ ಕಾಂಗ್ರೆಸ್ ವೀಕ್ಷಕ ಮಲ್ಲಿಕಾರ್ಜುನ ಸಮ್ಮುಖದಲ್ಲಿ ಸೊರಬ, ಆನವಟ್ಟಿ ಹಾಗೂ ತಾಳಗುಪ್ಪ ಹೋಬಳಿ ಕಾರ್ಯಕರ್ತರು, ಪದಾಧಿಕಾರಿಗಳು ಹಾಜರಿದ್ದರು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಬಲಿ ಬಂಗಾರಪ್ಪ ಅವರು ಸೊರಬಕ್ಕೆ ಕುಮಾರ್ ಬಂಗಾರಪ್ಪ ಏಕೈಕ ಕಾಂಗ್ರೆಸ್ ಅಭ್ಯರ್ಥಿ ಎಂದು ಸೂಚಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.