ADVERTISEMENT

ಕುವೆಂಪು ವಿಶ್ವವಿದ್ಯಾಲಯ ವೆಬ್‌ಸೈಟ್‌ನಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’

​ಪ್ರಜಾವಾಣಿ ವಾರ್ತೆ
Published 29 ಮೇ 2018, 9:36 IST
Last Updated 29 ಮೇ 2018, 9:36 IST
ಕುವೆಂಪು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂಬ ಘೋಷಣೆ
ಕುವೆಂಪು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂಬ ಘೋಷಣೆ   

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವೆಬ್‌ಸೈಟ್‌ ಅನ್ನು ದುಷ್ಕರ್ಮಿಗಳು ಸೋಮವಾರ ಹ್ಯಾಕ್ ಮಾಡಿದ್ದಾರೆ. ಹ್ಯಾಕರ್‌ಗಳು ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ತೆಗೆದು ಹಾಕಿದ್ದಾರೆ. ಅಲ್ಲದೆ ವೆಬ್‌ಸೈಟ್‌ನಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಬರೆಯಲಾಗಿದೆ. ‘ಹಂಟರ್‌ ಬಜ್ವಾ’ ಎಂಬ ಬರಹವೂ ಇದೆ.

ವಿ.ವಿ ಆಡಳಿತ ಮಂಡಳಿ ಇದರಿಂದ ದಿಗ್ಭ್ರಮೆಗೊಂಡಿದೆ. ಹ್ಯಾಕರ್‌ಗಳು ವೆಬ್‌ಸೈಟ್‌ ಭದ್ರತೆಯನ್ನು ಅಣಕ ಮಾಡುವಂತಹ ಬರಹಗಳನ್ನು ಪ್ರಕಟಿಸಿರುವುದು ಮುಜುಗರ ಉಂಟು ಮಾಡಿದ್ದು, ಈ ಸಂಬಂಧ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ದುಷ್ಕರ್ಮಿಗಳು ಹ್ಯಾಕ್‌ ಮಾಡಿದ ಕೆಲವೇ ಗಂಟೆಗಳಲ್ಲಿ ವೆಬ್‌ಸೈಟ್‌ ಸರಿಯಾಗಿದೆ.

ಈ ಬಗ್ಗೆ ಕುಲಪತಿ ಪ್ರೊ. ಜೋಗನ್‌ ಶಂಕರ್‌ ಪ್ರತಿಕ್ರಿಯಿಸಿ, ‘ಭಾನುವಾರ ರಾತ್ರಿ ವೆಬ್‌ಸೈಟ್‌ ಚೆನ್ನಾಗಿ ಕೆಲಸ ಮಾಡಿದೆ. ಆದರೆ ಬೆಳಿಗ್ಗೆ ಹ್ಯಾಕ್‌ ಮಾಡಿರುವುದು ಗಮನಕ್ಕೆ ಬಂದಿದ್ದು, ಸೈಬರ್‌ ಕ್ರೈಂನವರಿಗೆ ದೂರು ನೀಡಿದ್ದೇವೆ. ಈಗಾಗಲೇ ನಮ್ಮ ತಾಂತ್ರಿಕ ತಂಡ ವೆಬ್‌ಸೈಟ್‌ ಅನ್ನು ಯಥಾಸ್ಥಿತಿಗೆ ತಂದಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.