ಸೊರಬ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬಾ ದೇವಿಯ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆ ಯಿಂದ ನಡೆಯಿತು.
ಸೋಮವಾರ ಸಾಗರ ಉಪ ವಿಭಾಗಾಧಿಕಾರಿ ಡಾ. ಉದಯ ಕುಮಾರ್ ಶೆಟ್ಟಿ ಬೆಳಿಗ್ಗೆ ಸುಮಾರು 11ಕ್ಕೆ ರಥೋತ್ಸವಕ್ಕೆ ಚಾಲನೆ ನೀಡಿದರು.
ಹಾವೇರಿ, ವಿಜಾಪುರ, ರಾಯ ಚೂರು, ಹಿರೇಕೆರೂರು, ಶಿಗ್ಗಾವಿ, ರಾಣೆಬೆನ್ನೂರು ಶಿವಮೊಗ್ಗ, ದಾವಣೆಗೆರೆ ಜಿಲ್ಲೆಗಳಿಂದ ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಧಾರ್ಮಿಕ ವಿಧಿ– ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ದೀಡ್ ನಮಸ್ಕಾರ, ಮತ್ತು ಕಟ್ಟಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವ ಆಚರಣೆ ನೆರವೇರಿಸಿದರು. ರೊಟ್ಟಿ, ಬುತ್ತಿ, ಹೋಳಿಗೆಯನ್ನು ಸ್ಥಳದಲ್ಲಿಯೇ ತಯಾರಿಸಿ ದೇವಿಗೆ ಅರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.