ADVERTISEMENT

‘ಜನಹಿತ ಮರೆತ ರಾಜ್ಯ ಸರ್ಕಾರ’

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2017, 10:23 IST
Last Updated 1 ಅಕ್ಟೋಬರ್ 2017, 10:23 IST

ಶಿಕಾರಿಪುರ: ‘ಜನಹಿತ ಮರೆತ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಬದಲಾವಣೆ ಮಾಡುವ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರ ಮೇಲಿದೆ’ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಪಟ್ಟಣದ ಮಂಗಳ ಭವನದಲ್ಲಿ ಗುರುವಾರ ನಡೆದ ಬಿಜೆಪಿ ನಗರ ಶಕ್ತಿಕೇಂದ್ರಗಳ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿ ಜನಪರ ಆಡಳಿತ ನಡೆಸುತ್ತಿದ್ದಾರೆ. ದೇಶದ ರಾಜಕೀಯದಲ್ಲಿ ನಿರೀಕ್ಷೆಗೂ ಮೀರಿ ಆಮೂಲಾಗ್ರ ಬದಲಾವಣೆ ಆಗುತ್ತಿದೆ. ಉತ್ತರ ಪ್ರದೇಶವೂ ಒಳಗೊಂಡಂತೆ ಹಲವು ರಾಜ್ಯಗಳ ಚುನಾವಣೆಗಳಲ್ಲಿ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸಿದೆ. ನಮ್ಮ ರಾಜ್ಯದಲ್ಲಿ ಕೂಡ 150 ಸ್ಥಾನ ಪಡೆದು ಸರ್ಕಾರ ರಚಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಬಿ.ವೈ.ರಾಘವೇಂದ್ರ ಮಾತನಾಡಿ, ರಾಜ್ಯ ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡುತ್ತಿದೆ ಎಂದು ದೂರಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರುದ್ರೇಗೌಡ ಮಾತನಾಡಿದರು. ಮುಖಂಡರಾದ ಕೆ.ಶೇಖರಪ್ಪ, ಎಸ್‌.ಬಿ.ಮಠದ್‌, ಕೆ.ಎಸ್.ಗುರುಮೂರ್ತಿ, ಕೆ.ಹಾಲಪ್ಪ, ಸಾಲೇಶ್ವರ ಕರಿಬಸಪ್ಪ, ಜಯಲಿಂಗಪ್ಪ, ಟಿ.ಎಸ್‌.ಮೋಹನ್‌, ಕಬಾಡಿ ರಾಜಪ್ಪ, ಗುರುರಾಜ್‌ ಜಗತಾಪ್‌, ಎಂ.ಎಚ್‌.ರವೀಂದ್ರ, ಸೈಯದ್‌ಪೀರ್‌, ವಸಂತಗೌಡ, ರುದ್ರಮುನಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.