ADVERTISEMENT

ಡಿ.16ರಿಂದ ಸುತ್ತೂರು ಶಿವರಾತ್ರೀಶ್ವರರ ಜಯಂತಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2017, 9:57 IST
Last Updated 5 ಅಕ್ಟೋಬರ್ 2017, 9:57 IST

ಶಿವಮೊಗ್ಗ: ಸುತ್ತೂರು ಶಿವರಾತ್ರೀಶ್ವರ ಭಗವತ್ಪಾದರ 1058ನೇ ಜಯಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ವೆಂಕಟೇಶ ನಗರದ ಬಸವಕೇಂದ್ರದಲ್ಲಿ ಬುಧವಾರ ನಡೆಸಲಾಯಿತು.

ಶಿವರಾತ್ರೀಶ್ವರ ಭಗವತ್ಪಾದರ 1058ನೇ ಜಯಂತಿ ಮಹೋತ್ಸವ ಡಿ.16 ರಿಂದ 20ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದ್ದು, ಇದರ ಅದ್ದೂರಿ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಜಯಂತಿಯನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಮಾಜದವರು, ಸಾರ್ವಜನಿಕರು ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಯಿತು.

ಬಸವಕೇಂದ್ರದ ಅಧ್ಯಕ್ಷ ಜಿ.ಬೆನಕಪ್ಪ ಅಧ್ಯಕ್ಷತೆ ವಹಿಸಿದ್ದರು. ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವಕೇಂದ್ರದ ಬಸವಮರುಳಸಿದ್ಧ ಸ್ವಾಮೀಜಿ, ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

ADVERTISEMENT

ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಕೆ.ಜಿ.ನಿಂಗಪ್ಪ ಕಾರ್ಯಕ್ರಮದ ರೂಪುರೇಷೆ ಕುರಿತು ಪ್ರಾಸ್ತಾವಿಕ ಮಾತನಾಡಿದರು.

ಉದ್ಯಮಿ ಎಸ್‌.ರುದ್ರೇಗೌಡ, ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎನ್.ಜೆ.ರಾಜಶೇಖರ್, ಮೈಸೂರಿನ ಜಯಂತಿ ಮಹೋತ್ಸವದ ಕೇಂದ್ರ ಸಮಿತಿಯ ಸದಸ್ಯರಾದ ಪ್ರೊ.ಸುಬ್ಬಣ್ಣ, ಪ್ರೊ.ಡಿ.ಎಸ್. ಸದಾಶಿವಮೂರ್ತಿ, ಚನ್ನಬಸಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.