ಶಿಕಾರಿಪುರ: ಜಾನಪದ ಕಲೆಗಳನ್ನು ಸಾಮಾನ್ಯರ ನಡುವೆ ತಂದು ಜನಪ್ರಿಯಗೊಳಿಸುವ ಪ್ರಯತ್ನ ಯುವಜನ ಮೇಳದ ಉದ್ದೇಶ ಆಗಿದೆ ಎಂದು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಗಿರೀಶ್ ಪಟೇಲ್ ಹೇಳಿದರು.
ಶಿವಮೊಗ್ಗ ಜಿಲ್ಲಾಮಟ್ಟದ ಯುವಜನ ಮೇಳ ಕಾರ್ಯಕ್ರಮವನ್ನು ಶಿಕಾರಿಪುರದ ನರಸಪ್ಪ ಸ್ಮಾರಕ ಬಯಲು ರಂಗಮಂದಿರದಲ್ಲಿ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರನ್ನು ಒಗ್ಗೂಡಿಸಿ, ಚಿಂತನೆಗೆ ಹಚ್ಚುವ, ಸ್ಫೂರ್ತಿಯನ್ನು ಬಡಿದ್ದೆಬ್ಬಿಸುವ ಪ್ರಯತ್ನವನ್ನು ಯುವಜನ ಮತ್ತು ಕ್ರೀಡಾ ಇಲಾಖೆ ಮಾಡುತ್ತಿದೆ. ಡೋಳ್ಳು, ವೀರಗಾಸೆ, ಯಕ್ಷಗಾನ ಕಲೆಗಳನ್ನು ಉಳಿಸಿ, ಬೆಳೆಸಬೇಕಾಗಿದ್ದು, ಈ ನಿಟ್ಟಿನಲ್ಲಿ ಯುವಜನ ಇಲಾಖೆ ಕಾರ್ಯಪ್ರವೃತ್ತ ಆಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯಆರ್.ಕೆ. ಸಿದ್ದರಾಮಣ್ಣ ಮಾತನಾಡಿ, ಭಾರತೀಯ ಸಂಸ್ಕೃತಿಯ ದರ್ಶನ ಆಗಬೇಕಾದರೆ, ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಸಾಧ್ಯ. ಸಂಸ್ಕೃತಿಯ ಜತೆ ಮನೋರಂಜನೆ, ಮನೋರಂಜನೆಯ ಜತೆ ಮೌಲ್ಯ ಕೂಡಬೇಕು. ಆಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದರು.
`ಕಾಡಾ~ ಅಧ್ಯಕ್ಷ ಕೆ. ಶೇಖರಪ್ಪ, ಜಿಲ್ಲಾ ಜಾಗೃತ ಸಮಿತಿ ಸದಸ್ಯ ಕೆ.ಎಸ್. ಗುರುಮೂರ್ತಿ, ಪುರಸಭಾ ಅಧ್ಯಕ್ಷ ವೀಣಾ ಮಲ್ಲೇಶಪ್ಪ, ಉಪಾಧ್ಯಕ್ಷ ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಗುರುರಾಜ್ ಜಗತಾಪ್, ಎಪಿಎಂಸಿ ಅಧ್ಯಕ್ಷ ಸುಕೇಂದ್ರಪ್ಪ, ತಹಶೀಲ್ದಾರ್ ಕೆ.ಎಚ್. ಶಿವಕುಮಾರ, ತಾ.ಪಂ. ಉಪಾಧ್ಯಕ್ಷ ಹನುಮಂತಪ್ಪ, ಕಾರ್ಯನಿರ್ವಹಣ ಅಧಿಕಾರಿ ಡಾ.ಚಂದ್ರಶೇಖರ್, ವಾಸನ್ ರಾಮಚಂದ್ರ, ಯುವಜನ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೆಖರ್, ಡಿವೈಎಸ್‌ಪಿ ಶಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಪ್ಪ, ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಅಶ್ವಿನ್ ಪಟೇಲ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷಕೆ.ಎಸ್. ಹುಚ್ಚರಾಯಪ್ಪ, ಕಾರ್ಯದರ್ಶಿ ಚಂದ್ರಶೇಖರ್‌ಮಠದ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಹಿಮಂತರಾಜು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.