ADVERTISEMENT

ನೀತಿಸಂಹಿತೆ ಉಲ್ಲಂಘನೆ 177 ಪ್ರಕರಣ; 110 ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2013, 9:30 IST
Last Updated 26 ಏಪ್ರಿಲ್ 2013, 9:30 IST

ಶಿವಮೊಗ್ಗ: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಇದುವರೆಗೂ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ 32 ಮತ್ತು ಅಬಕಾರಿ ಇಲಾಖೆ ಅಡಿಯಲ್ಲಿ 145 ಪ್ರಕರಣಗಳು ದಾಖಲಾಗಿದ್ದು, ಒಟ್ಟು 177 ಪ್ರಕರಣಗಳು ದಾಖಲಾಗಿದ್ದು, 110 ಜನರ ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ತಿಳಿಸಿದರು.

223 ದೂರು
ಇದುವರೆಗೂ ಒಟ್ಟು 223 ದೂರುಗಳು ಚುನಾವಣಾ ಆಯೋಗಕ್ಕೆ ಬಂದಿದ್ದು, ಇವುಗಳಲ್ಲಿ 74 ಸುಳ್ಳು ದೂರುಗಳು ಬಂದಿವೆ. ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ರೂ 8,42,500 ಮತ್ತು ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ್ಙ 2,85,500 ನಗದು ವಶಪಡಿಸಿಕೊಳ್ಳಲಾಗಿದ್ದು,ರೂ 32 ಲಕ್ಷ ಮೌಲ್ಯದ 7 ಸಾವಿರ ಲೀಟರ್‌ಗೂ ಹೆಚ್ಚು ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಈಶ್ವರಪ್ಪ ವಿರುದ್ಧ ಎರಡು
ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕೆ.ಎಸ್. ಈಶ್ವರಪ್ಪ ವಿರುದ್ಧ 2, ಸೊರಬ ಕ್ಷೇತ್ರದ ಅಭ್ಯರ್ಥಿ ಹರತಾಳು ಹಾಲಪ್ಪ ವಿರುದ್ಧ 2, ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಸಿ.ಎಂ. ಇಬ್ರಾಹಿಂ ವಿರುದ್ಧ 1 ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೆ.ಜಿ. ಕುಮಾರಸ್ವಾಮಿ ವಿರುದ್ಧ ಒಂದು ಪ್ರಕರಣ ದಾಖಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.