ADVERTISEMENT

ನೈರುತ್ಯ ಕ್ಷೇತ್ರದ ಚುನಾವಣೆಗೆ ಸಿದ್ಧತೆ

ನೈರುತ್ಯ ಪದವೀಧರರ, ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2018, 6:18 IST
Last Updated 2 ಜೂನ್ 2018, 6:18 IST
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್‌ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ನೈರುತ್ಯ ಪದವೀಧರರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್‌ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ನೈರುತ್ಯ ಪದವೀಧರರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.   

ಶಿವಮೊಗ್ಗ: ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಸಜ್ಜುಗೊಂಡಿದ್ದು, ಮತದಾ ನದ ಅರ್ಹತೆ ಹೊಂದಿರುವ ಶಿಕ್ಷಕರಿಗೆ ಮತಗಟ್ಟೆ ವಿವರ ಇತ್ಯಾದಿ ಅಗತ್ಯ ಮಾಹಿತಿಗಳನ್ನು ಎಸ್ಎಂಎಸ್ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಲೋಕೇಶ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನೈರುತ್ಯ ಪದವೀಧರರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಸಿದ್ಧತೆಗಳ ಕುರಿತು ಅವರು ಪರಿಶೀಲನೆ ನಡೆಸಿದರು.

ಪ್ರತಿ ತಹಶೀಲ್ದಾರ್ ಕಚೇರಿಯಲ್ಲಿ ಈಗಾಗಲೇ ಹೆಲ್ಪ್ ಡೆಸ್ಕ್ ಪ್ರಾರಂಭಿ ಸಲಾಗಿದೆ. ಮತದಾರರ ಅಂತಿಮ ಪಟ್ಟಿ ಜಿಲ್ಲಾ ವೆಬ್‌ಸೈಟ್‌ shimoga.nic.in ಹಾಗೂ www.ceokarnataka.kar.nic.in ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಮೊಬೈಲ್ ಸಂಖ್ಯೆ ಲಭ್ಯವಿರುವ ಅರ್ಹ ಮತದಾರ ಶಿಕ್ಷಕರಿಗೆ ಮತ ಗಟ್ಟೆ ವಿವರ ಇತ್ಯಾದಿಗಳನ್ನು ಎಸ್ಎಂಎಸ್ ಮಾಡಲಾಗುವುದು. ಮತ ಚಲಾಯಿಸುವುದು ಹೇಗೆ ಎಂಬ ಮಾಹಿತಿಯನ್ನು ಒಳಗೊಂಡ ಭಿತ್ತಿ ಪತ್ರವನ್ನು ಎಲ್ಲಾ ಮತಗಟ್ಟೆಗಳ ಹೊರಗೆ ಪ್ರಕಟಿಸಬೇಕು ಎಂದು ಹೇಳಿದರು.

ADVERTISEMENT

ಸಮಯ ಬದಲಾವಣೆ: ಮತದಾನದ ಸಮಯವನ್ನು ಬೆಳಿಗ್ಗೆ 7ರಿಂದ 5 ಗಂಟೆಗೆ ಬದಲಾಯಿಸಲಾಗಿದ್ದು, ಮತದಾರರು ಇದನ್ನು ಗಮನಿಸಬೇಕು. ಪದವೀಧರ ಕ್ಷೇತ್ರದ ಮತದಾರರಿಗೆ ಬಲಗೈ ತೋರು ಬೆರಳಿಗೆ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರಿಗೆ ಮಧ್ಯದ ಬೆರಳಿಗೆ ಶಾಯಿ ಗುರುತು ಹಾಕಲಾಗುವುದು ಎಂದರು.

ಪ್ರತಿ ಮತಗಟ್ಟೆಯಲ್ಲಿ ಮತಗಟ್ಟೆ ಅಧಿಕಾರಿ ಸೇರಿ 4 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದು, 4 ಮಂದಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. ಮತಗಟ್ಟೆ ಅಧಿಕಾರಿ ಸಿಬ್ಬಂದಿಗೆ ರ್‍ಯಾಂಡ ಮೈಸೇಶನ್ ನಡೆಸಲಾಗುವುದು. ಮತಗಟ್ಟೆ ಅಧಿಕಾರಿಗಳಿಗೆ ಈಗಾಗಲೇ ಒಂದನೇ ಹಂತದ ತರಬೇತಿ ನೀಡ ಲಾಗಿದ್ದು, ಇನ್ನೊಂದು ಹಂತದ ತರಬೇತಿ ಯನ್ನು ನೀಡಲಾಗುವುದು. ಮತದಾನ ಯಾವುದೇ ಗೊಂದಲವಿಲ್ಲದಂತೆ ನಡೆಸಬೇಕು. ಮತದಾನ ಮುಗಿದ ತಕ್ಷಣ ಮತಪೆಟ್ಟಿಗೆಗಳನ್ನು ನಿಯಮಾನುಸಾರ ಸೀಲ್ ಮಾಡಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿಸಬೇಕು. ರಾತ್ರಿ 9 ಗಂಟೆ ಒಳಗಾಗಿ ಎಲ್ಲಾ ಮತಪೆಟ್ಟಿಗೆಗಳನ್ನು ಮೈಸೂರಿಗೆ ಕಳುಹಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತ ಮಹಾದೇವ ಮುರುಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.