ADVERTISEMENT

ಬಂತು ಗುಜರಾತ್‌, ಯು.ಪಿ.ಯ ಇವಿಎಂ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2018, 6:36 IST
Last Updated 27 ಫೆಬ್ರುವರಿ 2018, 6:36 IST
ವಿದ್ಯುನ್ಮಾನ ಮತಯಂತ್ರ
ವಿದ್ಯುನ್ಮಾನ ಮತಯಂತ್ರ   

ಶಿವಮೊಗ್ಗ: ರಾಜ್ಯದಲ್ಲಿ ಮೇನಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಗುಜರಾತ್, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಂದ ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಬಂದಿವೆ. ಜಿಲ್ಲೆಗೆ ಸುಮಾರು 3 ಸಾವಿರ ಮತಯಂತ್ರಗಳು ಬಂದಿದ್ದು, ಮ್ಯಾಮ್‌ಕೋಸ್ ಸಭಾಂಗಣದಲ್ಲಿ ಭಾರಿ ಬಿಗಿ ಭದ್ರತೆಯಲ್ಲಿ ಎಲ್ಲ ಮತಯಂತ್ರಗಳ ಪರಿಶೀಲನಾ ಕಾರ್ಯ ನಡೆಯುತ್ತಿದೆ.

ಮೂರು ಲಾರಿಗಳಲ್ಲಿ ಸೋಮವಾರ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಮತಯಂತ್ರಗಳನ್ನು ತರಲಾಯಿತು. ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ಪರಿಶೀಲನೆ ನಡೆಸಲಿದ್ದಾರೆ. ಪರಿಶೀಲನೆಯ ನಂತರ ಅವುಗಳನ್ನು ತಾಲ್ಲೂಕುಗಳಿಗೆ ಕಳುಹಿಸಿ ಕೊಡಲಾಗುತ್ತದೆ.

ಜಿಲ್ಲಾಡಳಿತ ಈ ಬಾರಿ ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲದಂತೆ ಸುಗಮವಾಗಿ ಚುನಾವಣೆ ನಡೆಯಲು ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಚುನಾವಣಾ ಆಯೋಗ ವಿದ್ಯುನ್ಮಾನ ಮತಯಂತ್ರಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೆ ಒಳಪಡಿಸುತ್ತಿದೆ.

ADVERTISEMENT

ಕಳೆದ ವರ್ಷ ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಬಳಸಿದ ಮತ ಯಂತ್ರಗಳನ್ನೇ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಬಳಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಆಗತ್ಯವಿರುವಷ್ಟು ಯಂತ್ರಗಳು ಈಗಾಗಲೇ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.