ಶಿಕಾರಿಪುರ: ಮಕ್ಕಳನ್ನು ಕೂಲಿ ಕೆಲಸ, ಬೈಕ್ ರಿಪೇರಿ ಕೆಲಸಗಳಿಗೆ ಕಳುಹಿಸದೆ, ಅವರನ್ನು ಶಾಲೆಗೆ ಕಳುಹಿಸಿ ಶಿಕ್ಷಿತರನ್ನಾಗಿಸುವ ಕಡೆ ಹೆಚ್ಚು ಗಮನ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಲ್ಪಸಂಖ್ಯಾತ ಸಮುದಾಯಕ್ಕೆ ಸಲಹೆ ನೀಡಿದರು.
ಪಟ್ಟಣದ ಕುಲುಮಿ ಕೇರಿಯಲ್ಲಿ ಈಚೆಗೆ ಅಲ್ಪಸಂಖ್ಯಾತರ ಶಾದಿಮಹಲ್ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕಟ್ಟಡ ಕಟ್ಟುವುದು ಸಾಧನೆ ಅಲ್ಲ, ಕಟ್ಟಿದ ಕಟ್ಟಡ ಜನರ ಅನೂಕೂಲಕ್ಕಾಗಿ ಬಳಕೆಯಾಗಬೇಕು ಎಂದರು.
ಹಾಗೆಯೇ, ನಾವುಗಳು ಹಿಂದೂ, ಮುಸ್ಲಿಂ, ಮತ್ತು ಕ್ರಿಶ್ಚಿಯನ್ ಎಂಬ ಭೇದ ಭಾವವಿಲ್ಲದೆ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎಂದು ಸಲಹೆ ಮಾಡಿದರು.
ಸಮಾರಂಭದಲ್ಲಿ ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ, ರಾಜ್ಯ ಕೈಮಗ್ಗ ಮಂಡಳಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಸರ್ಕಾರದ ಅಲ್ಪಸಂಖ್ಯಾತ ಕಾರ್ಯದರ್ಶಿ ಜಮೀರ್ ಪಾಷ, ರಾಜ್ಯ ಉರ್ದು ಅಕಾಡಮಿ ಅಧ್ಯಕ್ಷ ಮೌಲಾನಾ ಅಮ್ಜದ್ ಹುಸೇನ್ ಕರ್ನಾಟಕಿ, `ಕಾಡಾ~ ಅಧ್ಯಕ್ಷ ಕೆ. ಶೇಖರಪ್ಪ, ಪುರಸಭೆ ಅಧ್ಯಕ್ಷೆ ವೀಣಾ ಮಲ್ಲೆೀಶಪ್ಪ, ಮಾಜಿ ಅಧ್ಯಕ್ಷ ಟಿ.ಎಸ್. ಮೋಹನ್, ಸ್ಥಾಯಿ ಸಮಿತಿ ಅಧ್ಯಕ್ಷ ಗುರುರಾಜ್ ಜಗತಾಪ್, ಎ.ಪಿ.ಎಂ.ಸಿ ಅಧ್ಯಕ್ಷ ಸುಕೇಂದ್ರಪ್ಪ, ಮುಖಂಡರಾದ ಯೂಸ್‌ಫ್ ಆಲಿ, ಫಯಾಜ್, ಸಮೀವುಲ್ಲಾ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.