ADVERTISEMENT

‘ಮಾತೃ ಭಾಷೆಗಿರಲಿ ಪ್ರೀತಿ; ಅನ್ಯ ಭಾಷೆ ಮೇಲಿರಲಿ ಗೌರ’

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 5:56 IST
Last Updated 5 ಮಾರ್ಚ್ 2018, 5:56 IST

ರಿಪ್ಪನ್‌ಪೇಟೆ: ಪ್ರಪಂಚದಲ್ಲಿರುವ ಆರು ಸಾವಿರಕ್ಕೂ ಅಧಿಕ ಭಾಷೆಗಳಲ್ಲಿ ಭಾರತದಲ್ಲೇ ಸುಮಾರು 2 ಸಾವಿರ ಭಾಷೆಗಳಿವೆ. ಪ್ರತಿಯೊಂದು ಭಾಷೆಯೂ ಭಾವನೆಗಳ ಪ್ರತಿನಿಧಿ, ಸಂಸ್ಕೃತಿಯ ಸಂಕೇತ, ಜನಾಂಗದ ಉಸಿರಾಗಿ ಇಂದಿಗೂ ಜೀವಂತವಾಗಿ ನೆಲೆ ನಿಂತಿದೆ’ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಹಾಗೂ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಡಿ.ಮಂಜುನಾಥ್ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಪರಿಷತ್ತು, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಕಾಲೇಜಿನ ಸಾಹಿತ್ಯ ವೇದಿಕೆ ಆಶ್ರಯದಲ್ಲಿ ನಡೆದ ವಿಶ್ವ ಮಾತೃ ಭಾಷಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಪತಿ ಕೆ.ಹಳಗುಂದ, ಪದವಿ ಹಂತದಲ್ಲಿ ಕನ್ನಡ ಐಚ್ಛಿಕವಾಗಿ ಅಧ್ಯಯನ ಮಾಡುವವರಿಗೆ ಉನ್ನತ ಶಿಕ್ಷಣ, ಖಾಸಗಿ ಸಂಸ್ಥೆ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವುದರ ಮೂಲಕ ಕನ್ನಡದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹುಟ್ಟಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಪ್ರಾಂಶುಪಾಲ ಪ್ರೊ.ಕೆ.ಎಸ್‌. ನಳಿನಚಂದ್ರ ಅಧ್ಯಕ್ಷತೆ ವಹಿಸಿದ್ದರು. ತ.ಮ.ನರಸಿಂಹ, ಡಾ.ಎಚ್.ಆರ್. ತಿಪ್ಪೇಸ್ವಾಮಿ ಹಾಜರಿದ್ದರು.

ಕಾವ್ಯಾ ಪ್ರಾರ್ಥಿಸಿದರು. ರತ್ನಾಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಚೇತನಾ ಮತ್ತು ಆದಿತ್ಯ ನಿರೂಪಿಸಿದರು. ಸಂಧ್ಯಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.