ADVERTISEMENT

ಮೂಲವಿಜ್ಞಾನ ನಿರ್ಲಕ್ಷ್ಯ ಸಲ್ಲ: ಡಾ.ಶ್ರೀಪತಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2011, 9:00 IST
Last Updated 22 ಸೆಪ್ಟೆಂಬರ್ 2011, 9:00 IST

ಸಾಗರ: ಮೂಲ ವಿಜ್ಞಾನವನ್ನು ಸುಸ್ಥಿರ ಅಭಿವೃದ್ಧಿಗೆ ಬಳಸಿಕೊಳ್ಳುವ ಸಾಧ್ಯತೆಗಳ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಶಿವಮೊಗ್ಗ ಜವಾಹರ್‌ಲಾಲ್ ನೆಹರು ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ ಪ್ರಾಧ್ಯಾಪಕ ಡಾ.ಎಲ್.ಕೆ. ಶ್ರೀಪತಿ ಹೇಳಿದರು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಶೆಡ್ತಿಕೆರೆಯ ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ ಹಾಗೂ ಸಾಗರ ವಿಜ್ಞಾನ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ `ಇನ್‌ಸ್ಪೈರ್~ ತರಬೇತಿ  ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಮೂಲವಿಜ್ಞಾನ  ಅಭಿವೃದ್ಧಿಪಡಿಸುವ ಸಂಬಂಧ ವಿಶೇಷ ಯೋಜನೆ ರೂಪಿಸಿದೆ. ಪರಿಸರಕ್ಕೆ ಧಕ್ಕೆಯಾಗದಂತೆ ವಿಜ್ಞಾನ ಬಳಕೆ ಮುಖ್ಯ ಎಂದು ಸಲಹೆ ನೀಡಿದರು.

ಸಂಜಯ್ ಮೆಮೋರಿಯಲ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶಪಾಲ ಸಿ.ಎ. ರಾಜಶೇಖರ  ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ಎಚ್.ಎಲ್.ಎಸ್. ರಾವ್ ಹಾಜರಿದ್ದರು.

ಅಂಷುಮಾನ್ ಪ್ರಾರ್ಥಿಸಿದರು. ವಿಜ್ಞಾನ ಕೇಂದ್ರದ ಕಾರ್ಯದರ್ಶಿ ಕವಲಕೋಡು ವೆಂಕಟೇಶ್ ಸ್ವಾಗತಿಸಿದರು. ಪೂರ್ಣಪ್ರಜ್ಞ ಬೇಳೂರು ವಂದಿಸಿದರು. ಶಿವಶಂಕರ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.