ADVERTISEMENT

ರಾಜಕೀಯ ನನ್ನ ಮೂಲವೃತ್ತಿ: ಕುಮಾರ್ ಬಂಗಾರಪ್ಪ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2011, 8:30 IST
Last Updated 16 ಫೆಬ್ರುವರಿ 2011, 8:30 IST

ಸೊರಬ: ತಾಲ್ಲೂಕಿನ ಹಾಯದ ಬಳಿ ದಂಡಾವತಿ ನದಿಗೆ ತಮ್ಮ ಅಧಿಕಾರದ ಅವಧಿಯಲ್ಲಿ ಸೇತುವೆ ಮಂಜೂರು ಮಾಡಲಾಗಿತ್ತು ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ತಿಳಿಸಿದರು.
ಮಂಗಳವಾರ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ಅವರು, ನಂತರ ಪ.ಪಂ. ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಔಪಚಾರಿಕವಾಗಿ ಮಾತನಾಡಿದರು.

ಹಣವನ್ನು ಅನ್ಯ ಕಾಮಗಾರಿಗೆ ಬಳಸಿಕೊಳ್ಳಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಪ್ರಯಾಣಿಕರ ಹಿತದೃಷ್ಟಿಯಿಂದ ತ್ವರಿತ ಸೇತುವೆ ನಿರ್ಮಾಣ ಅಗತ್ಯ ಎಂದರು.
ಕಾಂಗ್ರೆಸ್ ಸದಸ್ಯರೊಂದಿಗೆ ಪಟ್ಟಣದ ಅಭಿವೃದ್ಧಿ ಕುರಿತು ಚರ್ಚಿಸಿದರು. ಸಾರ್ವಜನಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಖಾಸಗಿ ಬಸ್‌ನಿಲ್ದಾಣವನ್ನು ಕೆಎಸ್‌ಆರ್‌ಟಿಸಿ ನಿಲ್ದಾಣ ಎದುರು ನಿರ್ಮಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ರಾಜಕೀಯ ತಮ್ಮ ಮೂಲವೃತ್ತಿ. ಬಿಡುವ ಪ್ರಶ್ನೆಯೇ ಇಲ್ಲ ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು.ಪ.ಪಂ. ಸದಸ್ಯರಾದ ಸಮೀವುಲ್ಲಾ, ದಿನಕರಭಟ್ ಭಾವೆ, ಮಾಜಿ ಜಿ.ಪಂ. ಸದಸ್ಯ ಪಿ.ಎಸ್. ಪ್ರಶಾಂತ್, ಮುಖಂಡರಾದ ಮಹಾಲಿಂಗಪ್ಪ, ಜಗನ್ನಾಥಪ್ಪ, ಬಸವರಾಜ್ ಶೇಟ್, ಮಂಜಪ್ಪ,ಮಹಾದೇವ, ಎಂ.ಡಿ. ಉಮೇಶ್, ಪರಶುರಾಮ್ ಮೊದಲಾದವರು ಇದ್ದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.