ADVERTISEMENT

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2012, 8:05 IST
Last Updated 21 ಆಗಸ್ಟ್ 2012, 8:05 IST

ಶಿಕಾರಿಪುರ: ನಂಜುಡಪ್ಪ ವರದಿ ಪ್ರಕಾರ ಹಿಂದುಳಿದ ತಾಲ್ಲೂಕಾಗಿದ್ದ ಶಿಕಾರಿಪುರ ಇಂದು ರಾಜ್ಯದಲ್ಲೇ ಮೊದಲ ಮಾದರಿ ತಾಲ್ಲೂಕಾಗಿ ಹೆಸರಾಗಿದೆ. ಅನೇಕ ವರ್ಷಗಳ ಕಾಲ ಆಡಳಿತ ನಡೆಸಿದ ಜಿಲ್ಲೆಯ ಸಚಿವರು ಏಕೆ ನಮ್ಮ ರೀತಿ ಅಭಿವೃದ್ಧಿ ಕೆಲಸವನ್ನು ಮಾಡಲಿಲ್ಲ ಎಂದು ಪ್ರತಿ ಪಕ್ಷದ ಸದಸ್ಯರಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಶ್ನಿಸಿದರು.

ರೈತರು ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ, ಇಂದು ಅಮೆರಿಕಾದಂತಹ ರಾಷ್ಟ್ರಗಳಲ್ಲಿ ಕಾರ್ಯ ನಿರ್ವಹಿಸಿ ಉತ್ತಮ ಹೆಸರು ಮಾಡುತ್ತಿರುವವರು ನಮ್ಮ ದೇಶದ ಮಕ್ಕಳು ಎಂಬುದು ನಾವೆಲ್ಲರೂ ಹೆಮ್ಮೆ ಪಡುವ ವಿಷಯ. ಆದ್ದರಿಂದ, ನಿಮ್ಮ ಹೆಣ್ಣು ಮಕ್ಕಳಿಗೆ 18 ವರ್ಷಕ್ಕೆ ಮದುವೆ ಮಾಡುವುದನ್ನು ಬಿಟ್ಟು ಅವರಿಗೆ ಉನ್ನತ ಶಿಕ್ಷಣ ಮಟ್ಟದವರೆಗೂ ವಿದ್ಯಾಭ್ಯಾಸ ಕೊಡಿಸಿ ಎಂದರು.

ಇಂದು ್ಙ 1.40 ಕೋಟಿ ಕುಟುಂಬಗಳು ಸರ್ಕಾರದ ಯೋಜನೆಗಳಾದ ಭಾಗ್ಯಲಕ್ಷ್ಮೀ,ಸಂಧ್ಯಾ ಸುರಕ್ಷಾ ಸೇರಿದಂತೆ ಇತರ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು, ಮುಂದಿನ ಯಾವುದೇ ಸರ್ಕಾರ ಬಂದರೂ ನಾವು ನೀಡಿರುವ ಜನಪರ ರ್ಕಾರದ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದರು.

ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಅಂಬ್ಲಿಗೊಳ್ಳ ಜಲಾಶಯದಲ್ಲೂ ್ಙ  5 ಕೋಟಿ ವೆಚ್ಚದಲ್ಲಿ ಉದ್ಯಾನ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಾಗುವುದು ಎಂದ ಅವರು, ಮಾಜಿ ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ನಮ್ಮನೆಲ್ಲಾ ಗುರುತಿಸಿ ಮಂತ್ರಿ ಮಾಡಿ, ರೈತರ ಪರವಾಗಿ ಕೆಲಸ ಮಾಡಲು ಅನುವು ಮಾಡಿ ಕೊಟ್ಟಿದ್ದಾರೆ. ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರೈತರ ಪರವಾಗಿ ಮಾಡಿದ ಯೋಜನೆಗಳನ್ನು ನಾವು ಮುಂದುವರಿಸಿತ್ತಿದ್ದೇವೆ. ರೈತರ ಪರವಾಗಿ ವಿಧಾನ ಸಭೆಯಲ್ಲಿ ಎಂದು ಹೇಳಿದರು.
ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಯಡಿಯೂರಪ್ಪ ಅವರ ಜೀವನದ ಅಮಾವಾಸ್ಯೆ ದಿನ ಮುಗಿದು ಹುಣ್ಣಿಮೆ ದಿನ ಬಂದಿದೆ ಎಂದರು.

ಸಂಸತ್ ಸದಸ್ಯ ರಾಘವೇಂದ್ರ, ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ಮಂಜುಳಾ, ವಿಧಾನ ಪರಿಷತ್ತು ಸದಸ್ಯೆ ಭಾರತಿ ಶೆಟ್ಟಿ , ಮಾಜಿ ಸಚಿವ ಹರತಾಳು ಹಾಲಪ್ಪ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್‌ಗೌಡ, ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ, `ಕಾಡಾ~ ಅಧ್ಯಕ್ಷ ಕೆ. ಶೇಖರಪ್ಪ, ರಾಜ್ಯ ಉರ್ದು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಮ್ಜದ್ ಹುಸೇನ್ ಕರ್ನಾಟಕಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಜ್ಯೋತಿ ರಮೇಶ್, ತಾಲ್ಲೂಕು ಆಶ್ರಯ ಸಮಿತಿ ಅಧ್ಯಕ್ಷ ಟಿ.ಎಸ್. ಮಹಾಲಿಂಗಪ್ಪ, ಕೆಪಿಎಸ್‌ಸಿ ಮಾಜಿ ಸದಸ್ಯ ರುದ್ರೇಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.