ADVERTISEMENT

ಹೊಸನಗರ: ತಾಲ್ಲೂಕು ಮಟ್ಟದ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 8:48 IST
Last Updated 5 ಸೆಪ್ಟೆಂಬರ್ 2013, 8:48 IST

ಹೊಸನಗರ: ಕ್ರೀಡೆಯಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳುವಂತೆ ಜಿಲ್ಲಾ ಪಂಚಾಯ್ತಿ ಸದಸ್ಯೆ ಜ್ಯೋತಿ ಚಂದ್ರಮೌಳಿ ಸಲಹೆ ನೀಡಿದರು.

ಬುಧವಾರ  ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ಕ್ರೀಡಾ ಧ್ವಜಾರೋಹಣ ನೆರ ವೇರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಅಶ್ವಿನಿಕುಮಾರ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು.

ತಾ.ಪಂ. ಅಧ್ಯಕ್ಷೆ ನಾಗರತ್ನಾ ದೇವರಾಜ್ ಅಧ್ಯಕ್ಷತೆ ವಹಿಸಿ ಕ್ರೀಡಾಕೂಟಕ್ಕೆ ಶುಭ ಕೋರಿದರು.
ತಾ.ಪಂ. ಉಪಾಧ್ಯಕ್ಷೆ ಗೀತಾ ನಿಂಗಪ್ಪ, ಸದಸ್ಯೆ ನಿರ್ಮಲಾ ಗಣೇಶ್, ಕುನ್ನೂರು ಮಂಜಪ್ಪ, ಪೂರ್ಣಿಮಾ ಮೂರ್ತಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್, ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜೀವ್ ಶೆಟ್ಟಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರೇಣುಕಪ್ಪ, ಕಾರ್ಯದರ್ಶಿ ಬಸವಣ್ಯಪ್ಪ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಚಂದ್ರಪ್ಪ ಹಾಜರಿದ್ದರು. ದೈಹಿಕ ಪರಿವೀಕ್ಷಕ ಈಶ್ವರಪ್ಪ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಗುರುಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

7ಕ್ಕೆ ಕನಕ ಸಂಸ್ಕೃತಿ ಕಮ್ಮಟ
ಭದ್ರಾವತಿ: ಬೆಂಗಳೂರು ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸರ್‌ಎಂವಿ ಕಲಾ ಮತ್ತು ವಾಣಿಜ್ಯ ಕಾಲೇಜು ಆವರಣದಲ್ಲಿ ಸೆ. 7ರ ಶನಿವಾರ ಕನಕ ಸಂಸ್ಕೃತಿ ಕಮ್ಮಟ ಏರ್ಪಡಿಸಲಾಗಿದೆ.

ಕನಕದಾಸರ ಸಾಮಾಜಿಕ, ಸಾಂಸ್ಕೃತಿಕ, ಪರಮಾರ್ಥಿಕ, ಜೀವನ ದರ್ಶನ ಕುರಿತ ಸಂವಾದ ಅಂದು ಬೆಳಿಗ್ಗೆ 10.30 ರಿಂದ ಸಂಜೆ 5ಗಂಟೆ ತನಕ ನಡೆಯುವ ಕಮ್ಮಟದ ನಿರ್ದೇಶಕರಾಗಿ ಡಾ. ಮೇಟಿ ಮಲ್ಲಿಕಾರ್ಜುನ, ಡಾ. ಸಬಿತಾ ಬನ್ನಾಡಿ, ಕಾರ್ಯ ನಿರ್ವಹಿಸಲಿದ್ದು ಗಮಕವನ್ನು ಎಂ.ಎಸ್. ಸನತ್‌ಕುಮಾರ್ ನಡೆಸಿಕೊಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.