ADVERTISEMENT

‘ಉರ್ದು ಸಾಹಿತ್ಯ ನಿರ್ಲಕ್ಷ್ಯ ಸಲ್ಲ’

ಜಿಲ್ಲಾಮಟ್ಟದ ಉರ್ದು ಶಾಲಾ ಪ್ರತಿಭಾ ಕಾರಂಜಿ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2013, 7:00 IST
Last Updated 10 ಡಿಸೆಂಬರ್ 2013, 7:00 IST

ಹೊಸನಗರ: ಉರ್ದು ಸಾಹಿತ್ಯವನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸುವುದು ಸಮಂಜಸ ಅಲ್ಲ ಎಂದು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ಜ್ಯೋತಿ ಚಂದ್ರಮೌಳಿ ಅಭಿಪ್ರಾಯಪಟ್ಟರು.

ಸೋಮವಾರ ಉರ್ದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉರ್ದು ಮತ್ತು ಇತರ ಅಲ್ಪ ಸಂಖ್ಯಾತ ಬಾಷೆಗಳ ನಿರ್ದೇಶನಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಹಾಗೂ ತಾಲ್ಲೂಕು ಉರ್ದು ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಉರ್ದು ಪ್ರಾಥಮಿಕ ಶಾಲೆಗಳ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸ್ಪರ್ಧೆಯ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾದೇಶಿಕ ಭಾಷೆಯಾಗಿ ಉತ್ತರಪ್ರದೇಶದಲ್ಲಿ ಜನ್ಮತಾಳಿದ ಉರ್ದು ಸಾಹಿತ್ಯಕ್ಕೆ ವಿಶ್ವದಲ್ಲಿ ತನ್ನದೇ ಆದ ಸ್ಥಾನ ಇದೆ. ಅದನ್ನು ಬಾಹ್ಯ ಪ್ರಪಂಚಕ್ಕೆ ತೋರಿಸುವ ಕೆಲಸ ಈಗ ಆಗಬೇಕಿದೆ ಎಂದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನಾಗರತ್ನಾ ದೇವರಾಜ್ ಮಾತನಾಡಿ, ಉರ್ದು ಶಾಲೆಯಲ್ಲಿನ ಮಕ್ಕಳ ದಾಖಲಾತಿ ಸಂಖ್ಯೆ ಇಳಿಮುಖವಾಗುತ್ತಿರುವುದು ಭಾಷಾ ಬೆಳವಣಿಗೆಯ ದೃಷ್ಟಿಯಿಂದ ಕಳವಳಕಾರಿ ಎಂದು ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಉರ್ದು ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಫೀಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಉರ್ದು ಭಾಷೆಯ ನಿರ್ಲಕ್ಷ್ಯ ಸಲ್ಲದು ಎಂದರು.

ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಗೀತಾ ನಿಂಗಪ್ಪ, ಪಟ್ಟಣ ಪಂಚಾಯ್ತಿ ಸದಸ್ಯರಾದ ಡಿ.ಎಂ. ರತ್ನಾಕರ ಶೆಟ್ಟಿ, ಕೃಷ್ಣವೇಣಿ, ಸುಜಾತಾ ಉಡುಪ, ಮಾಜಿ ಸದಸ್ಯ ಕೆ.ಇಲಿಯಾಸ್, ಜಿಲ್ಲಾ ಉರ್ದು ಶಾಲಾ ನೋಡೆಲ್ ಅಧಿಕಾರಿ ಅಬ್ದುಲ್ ಗಫೂರ್ ಮುಲ್ಲಾ ಹಾಜರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಜಾಕೀರ್ ಸಾಬ್ ಕಾರ್ಯಕ್ರಮ ನಿರೂಪಿಸಿದರು. ಜಾವೇದ್ ಭಾಷಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.